SUDDIKSHANA KANNADA NEWS/ DAVANAGERE/ DATE:13-03-2025
ಶಿವಮೊಗ್ಗ: 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ.
ನೇಮಿಸಿಕೊಂಡ ಮಾಲೀಕರಿಗೆ ರೂ.50,000 ವರೆಗೆ ದಂಡ ಹಾಗೂ 2 ವರ್ಷದವರೆಗಿನ ಸೆರೆಮನೆ ವಾಸದ ಶಿಕ್ಷೆ ಇದ್ದು ತಪ್ಪಿತಸ್ಥ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು. ಹಾಗೂ ಕೆಲಸಕ್ಕೆ ಸೇರಿಸಿದ ಪಾಲಕರ ಮೇಲೆಯೂ ದಂಡ ವಿಧಿಸಲಾಗುವುದು. ಇಂತಹ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರು ಜಿಲ್ಲೆಯಲ್ಲಿ ಎಲ್ಲಿಯಾದರೂ ಕಂಡು ಬಂದರೆ ಮಕ್ಕಳ ಸಹಾಯವಾಣಿ 1098/112 ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬಹುದು.
ಜಿಲ್ಲೆಯಾದ್ಯಂತ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಕಾರ್ಯಾಚರಣೆ ನಡೆಯುತ್ತಿದ್ದು ಮಕ್ಕಳ ಸಹಾಯವಾಣಿಗೆ ಬಂದ ದೂರಿನ ಅನ್ವಯ ಇತ್ತೀಚೆಗೆ ಶಿವಮೊಗ್ಗದ ಪ್ರತಿಷ್ಟಿತ ಹೋಟೆಲ್ ಹಾಗೂ ಶಿಕಾರಿಪುರ ತಾಲ್ಲೂಕಿನ ಆಟೋಮೊಬೈಲ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಬಾಲಕರನ್ನು ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಅಧಿಕಾರಿಗಳು ಸ್ಥಳ ಭೇಟಿ ಮಾಡಿ ಬಾಲಕರನ್ನು ರಕ್ಷಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಅಧಿಕಾರಿಗಳು ಸ್ಥಳ ಭೇಟಿ ಮಾಡಿ ಬಾಲಕರನ್ನು ರಕ್ಷಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿರುತ್ತಾರೆ.
ಮಕ್ಕಳ ಕಲ್ಯಾಣ ಸಮಿತಿ ಸಭೆಯಲ್ಲಿ ಮಕ್ಕಳು ಹಾಗೂ ಪೋಷಕರನ್ನು ವಿಚಾರಣೆ ಮಾಡಲಾಗಿ ಮಕ್ಕಳು ಬಾಲಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದುದನ್ನು ಖಾತ್ರಿಪಡಿಸಿಕೊಂಡು ಸಂಬಂಧಪಟ್ಟ ಮಾಲೀಕರ ವಿರುದ್ದ ಬಾಲಕಾರ್ಮಿಕ/ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ ಕಾಯ್ದೆ-1986 ಹಾಗೂ ತಿದ್ದುಪಡಿ ಕಾಯ್ದೆ 2016)ರಡಿಯಲ್ಲಿ ಪ್ರಕರಣ ದಾಖಲಿಸುವಂತೆ ಕಾರ್ಮಿಕ ಇಲಾಖೆಗೆ ನಿರ್ದೇಶನ ನೀಡಿದ್ದು, ಇದರನ್ವಯ ಇಲಾಖೆಯಿಂದ ಮಾಲೀಕರ ವಿರುದ್ದ ಪ್ರಕರಣ ದಾಖಲಾಗಿದ್ದು ಮಕ್ಕಳ ಪುನರ್ವಸತಿಗಾಗಿ ಮಾಲೀಕರಿಂದ ರೂ.20,000 ಕಾರ್ಪಸ್ ನಿಧಿಯನ್ನು ವಸೂಲಿ ಮಾಡಲಾಗಿರುತ್ತದೆ ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತಾಜುದ್ದೀನ್ ಖಾನ್ ತಿಳಿಸಿದ್ದಾರೆ.