ಬೆಂಗಳೂರಿನ 8 ತಿಂಗಳ ಮಗುವಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ, ಈ ವೈರಸ್ ಭಾರತದಲ್ಲಿ ಸಾಮಾನ್ಯವಾಗಿದ್ದು, ಚೀನಾದಲ್ಲಿ ಪತ್ತೆಯಾಗಿರುವ ಹೂಮನ್ ಮೆಟಾಪ್ಲೊಮೋವೈರಸ್ನೊಂದಿಗೆ ಇದಕ್ಕೆ ಸಂಬಂಧ ಇದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹಾಗಾಗಿ ಚಿಂತೆ ಬೇಡ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ.