SUDDIKSHANA KANNADA NEWS/ DAVANAGERE/ DATE:31-03-2025
ದಾವಣಗೆರೆ: ನ್ಯಾಮತಿ ಪಟ್ಟಣದ ಎಸ್ ಬಿ ಐ ಬ್ಯಾಂಕ್ ದರೋಡೆಕೋರರ ಬಂಧಿಸಿ, 17 ಕೆಜಿಗೂ ಅಧಿಕ ಬಂಗಾರ ವಶಪಡಿಸಿಕೊಂಡ ದಾವಣಗೆರೆ ಪೊಲೀಸರ ಕಾರ್ಯಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಗೃಹ ಸಚಿವರಿಂದ ತಂಡಕ್ಕೆ ಬಹುಮಾನ ಮತ್ತು 10 ಪೊಲೀಸರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡುವುದಾಗಿ ತಿಳಿಸಿದ್ದಾರೆ ಎಂದು ಪೂರ್ವ ವಲಯದ ಪೊಲೀಸ್ ಮಹಾ ನಿರ್ದೇಶಕ ರವಿಕಾಂತೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಗೃಹ ಸಚಿವರು ಪೊಲೀಸರ ಈ ಕಾರ್ಯವನ್ನು ಶ್ಲಾಘಿಸಿ ಈ ತಂಡದಲ್ಲಿ ಕೆಲಸ ಮಾಡಿದ ಅಧಿಕಾರಿ ಮತ್ತು ಸಿಬ್ಬಂದಿಗಳಲ್ಲಿ ಹತ್ತು ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮುಖ್ಯಮಂತ್ರಿಗಳ ಪದಕಗಳನ್ನು ಘೋಷಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಡಿಜಿ, ಐಜಿಪಿ ಬಹುಮಾನ ಘೋಷಿಸಿ ಪ್ರಶಂಸೆ:
ಡಿಜಿ ಮತ್ತು ಐಜಿಪಿ, ಕಾನೂನು ಮತ್ತು ಸುವ್ಯವಸ್ಥೆ, ಅಪರಾಧ ಮತ್ತು ತಾಂತ್ರಿಕ ಸೇವೆಗಳ ಎಡಿಜಿಪಿ ಅವರು, ಈ ಕಾರ್ಯವನ್ನು ಶ್ಲಾಘಿಸಿ ತಂಡಕ್ಕೆ ನಗದು ಬಹುಮಾನ ಘೋಷಿಸಿದ್ದು ಹಾಗೂ ಪ್ರಶಂಸನಾ ಪತ್ರ ನೀಡಿದ್ದಾರೆ ಎಂದು
ಹೇಳಿದರು.