ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನಾಳೆಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಕಲರವ: ರಾಷ್ಟ್ರಮಟ್ಟದ ಹೊನಲು ಬೆಳಕಿನ ಲೀಗ್ ಕಂ ನಾಕೌಟ್ ಕ್ರಿಕೆಟ್ ಪಂದ್ಯಾವಳಿ

On: November 27, 2023 12:26 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:27-11-2023

ದಾವಣಗೆರೆ: ಪ್ರತಿವರ್ಷದಂತೆ ಈ ವರ್ಷವೂ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರಮಟ್ಟದ ಹೊನಲು ಬೆಳಕಿನ ಲೀಗ್ ಕಂ ನಾಕೌಟ್ ಕ್ರಿಕೆಟ್ ಪಂದ್ಯಾವಳಿಯು ನವೆಂಬರ್ 28ರಿಂದ ಆರಂಭಗೊಳ್ಳಲಿದ್ದು, ಪಾರ್ವತಮ್ಮ ಶಾಮನೂರು ಶಿವಶಂಕರಪ್ಪರ ಸವಿನೆನಪಿಗಾಗಿ ಆಯೋಜಿಸಲಾಗಿದೆ ಎಂದು ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ರಿಕೆಟ್ ಹಬ್ಬಕ್ಕೆ ಮಾಜಿ ಸಚಿವರೂ, ಹಾಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ,ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್.ಮಲ್ಲಿಕಾರ್ಜುನ್ ಅಂದು ಸಂಜೆ ಆರು ಗಂಟೆಗೆ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ವೇಳೆ ದಾವಣಗೆರೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಎಸ್ಪಿ ಉಮಾ ಪ್ರಶಾಂತ್, ಉದ್ಯಮಿಗಳಾದ ಅಥಣಿ ವೀರಣ್ಣ, ಆಣಬೇರು ರಾಜಣ್ಣ, ಶ್ರೀನಿವಾಸ್ ಶಿವಗಂಗಾ, ರಾಜುರೆಡ್ಡಿ, ಉದಯ ಶಿವಕುಮಾರ್, ಸಮರ್ಥ, ಪ್ರಭಾ ಮಲ್ಲಿಕಾರ್ಜುನ, ಕುರುಡಿ ಗಿರೀಶ್ ಸೇರಿದಂತೆ ಹಲವು ಕ್ರೀಡಾ ಪ್ರೋತ್ಸಾಹಕರು ಭಾಗವಹಿಸಲಿದ್ದಾರೆ. ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಾರಾಷ್ಟ್ರ, ತಮಿಳುನಾಡು ಮತ್ತು ಉತ್ತರ ಪ್ರದೇಶದ ಅಯೋಧ್ಯಾ ನಗರದ ತಂಡ ಹಾಗೂ ಕರ್ನಾಟಕ ರಾಜ್ಯದ ಬೆಂಗಳೂರು, ಮೈಸೂರು, ಮಂಗಳೂರು, ಉಡುಪಿ, ತುಮಕೂರು, ಶಿವಮೊಗ್ಗ, ಹುಬ್ಬಳ್ಳಿ, ಸೇರಿದಂತೆ ಒಟ್ಟು 38 ತಂಡಗಳು ಭಾಗವಹಿಸಲಿದ್ದು, ಒಟ್ಟು 390 ಆಟಗಾರರು ಪಾಲ್ಗೊಳ್ಳಲಿದ್ದಾರೆ. ಎಲ್ಲಾ ಕ್ರೀಡಾಪಟುಗಳಿಗೆ ಟೀಶರ್ಟ್ ಹಾಗೂ ಊಟ ಮತ್ತು ವಸತಿ ನೀಡಲಾಗುವುದು ಎಂದರು.

ಸಹ ಕಾರ್ಯದರ್ಶಿ ಜಯಪ್ರಕಾಶ್ ಗೌಡ ಮಾತನಾಡಿ, ಈ ಟೂರ್ನಿಯಲ್ಲಿ ವಿಜೇತರಿಗೆ ಪ್ರಥಮ ಸ್ಥಾನ ರೂ.5.05.555 ನಗದು ಮತ್ತು ಶಾಮನೂರು ಡೈಮಂಡ್ ಕಪ್, ದ್ವಿತೀಯ ತಂಡಕ್ಕೆ 3,05,555 ನಗದು ಮತ್ತು ಶಿವಗಂಗಾ ಕಪ್ ಹಾಗೂ ತೃತೀಯ ತಂಡಕ್ಕೆ ರೂ.1,55.500 ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುವುದು. ಎಲ್ಲಾ ಪಂದ್ಯಾವಳಿಗಳನ್ನು ಯೂಟ್ಯೂಬ್ ನಲ್ಲಿ ನೇರ ಪ್ರಸಾರ ಇರುತ್ತದೆ. ಈ ಟೂರ್ನಿಯ ಅಂದಾಜು ವೆಚ್ಚ 35ಲಕ್ಷ ಆಗಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಹಾಲಪ್ಪ, ಆಕಾಶ್, ಕಾರ್ತಿಕ್, ಪ್ರಕಾಶ್, ರಾಘವೇಂದ್ರ, ಯೋಗೇಶ್, ಜಿ.ಬಿ.ಪಾಟೀಲ್, ನಿಖಿಲ್ ಶೆಟ್ಟಿ, ವಿಜಯ್ ಮತ್ತಿತರರು ಉಪಸ್ಥಿತರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment