ದಾವಣಗೆರೆ: ಭದ್ರಾ ಜಲಾಶಯದಿಂದ ಏಕಪಕ್ಷೀಯವಾಗಿ ನಾಲೆಗೆ ನೀರು ಹರಿಸಿರುವ ಸರ್ಕಾರದ ನಿರ್ಧಾರವನ್ನು ಖಂಡಿಸಿ, ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಜಿ. ಶಾಂತನಗೌಡ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ಈ ಕುರಿತು ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬರೆದಿರುವ ಪತ್ರವನ್ನು ದಾವಣಗೆರೆ ವರದಿಗಾರರ ಕೂಟದಲ್ಲಿ ಕರೆದಿದ್ದ ಪತ್ರಿಕಾಗೋಷ್ಛಿಯಲ್ಲಿ ತೋರಿಸಿದ ಅವರು, ಇಂದು ಸಂಜೆ ಖುದ್ದಾಗಿ ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿ ತಮ್ಮ ಅಳಲನ್ನು ತೋಡಿಕೊಳ್ಳುವುದಾಗಿ ಸ್ಪಷ್ಟಪಡಿಸಿದರು.
ನೀರು ನಿಲ್ಲಿಸಲು ಆಗ್ರಹ: ತಕ್ಷಣವೇ ಭದ್ರಾ ಅಣೆಕಟ್ಟಿನಿಂದ ಹರಿಸುತ್ತಿರುವ ನೀರನ್ನು ನಿಲ್ಲಿಸಿ, ಕೂಡಲೇ ಐ.ಸಿ.ಸಿ ಸಭೆ ಕರೆದು ವೈಜ್ಞಾನಿಕವಾಗಿ ತೀರ್ಮಾನ ಕೈಗೊಳ್ಳಬೇಕು ಎಂದು ಶಾಂತನಗೌಡ ಒತ್ತಾಯಿಸಿದರು.
ಅಹೋರಾತ್ರಿ ಧರಣಿ ಎಚ್ಚರಿಕೆ: ಸರ್ಕಾರ ತನ್ನ ನಿರ್ಧಾರ ಹಿಂಪಡೆಯದಿದ್ದಲ್ಲಿ, ನಮ್ಮ ಭಾಗದ ಶಾಸಕರು ರೈತರ ಹಿತದೃಷ್ಟಿಯಿಂದ ರಾಜೀನಾಮೆ ನೀಡಿ ಭದ್ರಾ ಅಣೆಕಟ್ಟು ಮುಂಭಾಗ ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸಂಜೆ ರಾಜೀನಾಮೆ ಸಲ್ಲಿಕೆ: ರೈತರು ಹಾಗೂ ಕ್ಷೇತ್ರದ ಅನ್ನದಾತರ ಹಿತದೃಷ್ಟಿಯಿಂದ ಈಗಾಗಲೇ ರಾಜೀನಾಮೆ ನೀಡಲು ತೀರ್ಮಾನಿಸಿದ್ದು, ಇಂದು ಸಂಜೆ ಮುಖ್ಯಮಂತ್ರಿಗಳಿಗೆ ಪತ್ರ ಹಸ್ತಾಂತರಿಸುವುದಾಗಿ ತಿಳಿಸಿದರು.





Leave a comment