Home ದಾವಣಗೆರೆ ಹೊನ್ನಾಳಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ: ಎತ್ತೊಯ್ದು ವಾಹನದಲ್ಲಿ ರೇಣುಕಾಚಾರ್ಯ ಕೂರಿಸಿದ ಪೊಲೀಸರು!
ದಾವಣಗೆರೆನವದೆಹಲಿಬೆಂಗಳೂರು

ಹೊನ್ನಾಳಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ: ಎತ್ತೊಯ್ದು ವಾಹನದಲ್ಲಿ ರೇಣುಕಾಚಾರ್ಯ ಕೂರಿಸಿದ ಪೊಲೀಸರು!

Share
ಹೊನ್ನಾಳಿ
Share

ದಾವಣಗೆರೆ: ಭಾರತೀಯ ಜನತಾ ಪಾರ್ಟಿ – ಹೊನ್ನಾಳಿ ಮತ್ತು ನ್ಯಾಮತಿ ಮಂಡಲದ ವತಿಯಿಂದ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಹೊನ್ನಾಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದ ಈ ಪ್ರತಿಭಟನೆಯ ವೇಳೆ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರನ್ನು ಪೊಲೀಸರು ಬಲವಂತವಾಗಿ ಎತ್ತಿಕೊಂಡು ಹೋಗಿ ವಾಹನದಲ್ಲಿ ಕೂರಿಸಿ ವಶಕ್ಕೆ ಪಡೆದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದರೂ, ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆಯನ್ನು ಮುಂದುವರಿಸಿದರು. ಜನಸಾಮಾನ್ಯರ ಬದುಕಿನ ಮೇಲೆ ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಸರ್ಕಾರದ ವಿರುದ್ಧ ಮುಖಂಡರು ತೀವ್ರ ವಾಗ್ದಾಳಿ ನಡೆಸಿದರು.

ಬೆಲೆ ಏರಿಕೆ ವಿರೋಧಿ ಪ್ರತಿಭಟನೆ: ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದರೂ ನಿಯಂತ್ರಣಕ್ಕೆ ತರುವಲ್ಲಿ ವಿಫಲವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಶಕ್ಕೆ: ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸ್ಥಳದಲ್ಲಿದ್ದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.

ಹೋರಾಟದ ಸಂಕಲ್ಪಕ್ಕೆ ಬದ್ಧ: ಪೊಲೀಸರು ಪ್ರತಿಭಟನೆಯ ಧ್ವನಿಯನ್ನು ಅಡಗಿಸಲು ಯತ್ನಿಸಿದರೂ, ಜನರ ಪರವಾಗಿ ನ್ಯಾಯಕ್ಕಾಗಿ ಧ್ವನಿ ಎತ್ತುವ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಬಿಜೆಪಿ ಮುಖಂಡರು ಎಚ್ಚರಿಸಿದರು.

ಈ ಬೃಹತ್ ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Share

Recent Posts

Recent Comments

No comments to show.
Related Articles