ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಆಶಾ ಕಾರ್ಯಕರ್ತೆಯರಿಗೆ 1 ಸಾವಿರ ರೂ. ಗೌರವಧನ ಹೆಚ್ಚಳ! ತಾಲ್ಲೂಕು ಆಸ್ಪತ್ರೆಗಳ ಆಡಳಿತ ಜಿಲ್ಲಾ ಶಸ್ತ್ರಚಿಕಿತ್ಸಕರ ವ್ಯಾಪ್ತಿಗೆ

On: March 7, 2025 11:54 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:07-03-2025

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1,000 ರೂ. ಹೆಚ್ಚಿಸಲಾಗುವುದು.

ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯನ್ನು ದೃಢಪಡಿಸಲು ಸಂಚಾರಿ ಆಹಾರ ಪ್ರಯೋಗಾಲಯಗಳ ಮೂಲಕ ಆಹಾರ ಮಾದರಿಗಳನ್ನು ವಿಶ್ಲೇಷಿಸಿ, ಅಸುರಕ್ಷಿತ ಮತ್ತು ಕಳಪೆ ಆಹಾರವನ್ನು ಗುರುತಿಸಿ ಕಾನೂನಿನ ಅನುಸಾರ ಕ್ರಮಕೈಗೊಳ್ಳಲಾಗುತ್ತಿದೆ.

ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಗುಣಮಟ್ಟದ ಔಷಧಗಳನ್ನು ವಿತರಿಸಲು KSMSCL ಸಂಸ್ಥೆಯನ್ನು ಬಲಪಡಿಸಲಾಗುವುದು. ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ ಮತ್ತು ನಿರ್ವಹಣೆಗಾಗಿ ತಂತ್ರಾಂಶವನ್ನು ಪರಿಚಯಿಸಲಾಗುವುದು.

ಸುಟ್ಟ ಗಾಯಗಳ ತಡೆಗಟ್ಟುವಿಕೆ ಹಾಗೂ ಸಂತ್ರಸ್ತರ ಚಿಕಿತ್ಸೆಗೆ ಸಂಬಂಧಿಸಿದಂತೆ, ಸುಟ್ಟ ಗಾಯಗಳ ಚಿಕಿತ್ಸಾ ನೀತಿಯನ್ನು ರಾಷ್ಟ್ರದಲ್ಲಿಯೇ ಪ್ರಪ್ರಥಮವಾಗಿ ರಾಜ್ಯದಲ್ಲಿ ಜಾರಿಗೆ ತರಲಾಗುವುದು.

ಆರೋಗ್ಯ ಇಲಾಖೆಯಲ್ಲಿ ಈ ಕೆಳಕಂಡ ಸುಧಾರಣಾ ಕ್ರಮಗಳನ್ನು ಪ್ರಸಕ್ತ ಸಾಲಿನಲ್ಲಿ ತೆಗೆದುಕೊಳ್ಳಲಾಗುವುದು.
ಕೆ.ಪಿ.ಎಂ.ಇ ಕಾಯ್ದೆಯಡಿ ನೀಡಲಾಗುವ ಮಾನ್ಯತೆ ಪ್ರಮಾಣ ಪತ್ರವನ್ನು (Accreditation Certificate) 30 ದಿನದ ಕಾಲಮಿತಿಯೊಳಗೆ ಒದಗಿಸಲಾಗುವುದು. ಮೊಬೈಲ್‌ ತಂತ್ರಾಂಶದ ಮೂಲಕ ಹಾಜರಾತಿ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ವರ್ಗಾವಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಎಲ್ಲಾ ಅಧಿಕಾರಿ ಸಿಬ್ಬಂದಿ ವರ್ಗದವರಿಗೂ ಪಾರದರ್ಶಕವಾದ ವರ್ಗಾವಣೆ ನೀತಿಯನ್ನು ರೂಪಿಸಲಾಗುವುದು.

ರಾಜ್ಯದಲ್ಲಿನ ತಾಲ್ಲೂಕು ಆಸ್ಪತ್ರೆಗಳ ಆಡಳಿತವನ್ನು ಜಿಲ್ಲಾ ಶಸ್ತ್ರಚಿಕಿತ್ಸಕರ ವ್ಯಾಪ್ತಿಗೆ ಒಳಪಡಿಸಲಾಗುವುದು. ಇಲಾಖೆಯಲ್ಲಿ ಖಾಲಿಯಿರುವ Critical Vacancy ಹುದ್ದೆಗಳನ್ನು ತರ್ಕಬದ್ಧಗೊಳಿಸಿ (Rationalize) ಆದ್ಯತೆಯ ಮೇಲೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment