SUDDIKSHANA KANNADA NEWS/ DAVANAGERE/ DATE-19-06-2025
ಬೆಂಗಳೂರು: ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇಕಡಾ 15ರಷ್ಟು ಮೀಸಲಾತಿ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ವಸತಿ ಇಲಾಖೆಯಡಿ ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಗಳಡಿ ಅಲ್ಪಸಂಖ್ಯಾತ ಸಮುದಾಯದವರಿಗೆ ನಿಗದಿ ಪಡಿಸಿರುವ ಶೇ. 10 ರ ಮೀಸಲಾತಿಯನ್ನು 15% ಗೆ ಹೆಚ್ಚಿಸಲು ನಿರ್ಣಯ ಮಾಡಲಾಗಿದೆ.
ಕೇಂದ್ರ ಸರ್ಕಾರದವರು ಅಲ್ಪಸಂಖ್ಯಾತರಿಗೆ ಕೊರತೆಯಿದ್ದ ವಸತಿಯನ್ನು ಗಮನಿಸಿ ಸೂಚನೆ ನೀಡಿದೆ. ನಮ್ಮ ಸರ್ಕಾರವು ಈ ಸಮುದಾಯದವರ ವಸತಿರಹಿತರನ್ನು ಹಾಗೂ ಸಾಮಾಜಿಕ ನ್ಯಾಯವನ್ನು ಗಮನದಲ್ಲಿರಿಸಿಕೊಂಡು ಮೀಸಲಾತಿ
ಹೆಚ್ಚಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.