SUDDIKSHANA KANNADA NEWS/ DAVANAGERE/ DATE-05-05-2025
ಬೆಂಗಳೂರು: ಇವತ್ತಿನಿಂದ ಮಾರ್ಚ್ 17 ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೆ ಮನೆ ಭೇಟಿ ಕೊಡುವ ಜೊತೆಗೆ, ಮೊದಲ ಹಂತದಲ್ಲಿ 5-5-25 ರಿಂದ 17-5-2025 ಹಾಗೂ 19-5-2025 ರಿಂದ 21-5-2025 ರವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಸಮೀಕ್ಷೆ ನಡೆಯುತ್ತದೆ. ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು ಎಂದು ತಿಳಿಸಿದರು.
ಮೂರನೇ ಹಂತದಲ್ಲಿ 19-5-2025 ರಿಂದ 22-5-2025 ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು ಎಂದರು.
ನಿಖರ ದತ್ತಾಂಶ ಸಂಗ್ರಹಿಸಿದ ಮೇಲೆ ನಮಗೆ ಶಿಫಾರಸ್ಸು ಮಾಡ್ತಾರೆ. ಒಟ್ಟು 60 ದಿನ ಸಮಯಾವಕಾಶ ನೀಡಲಾಗಿದೆ.
ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ ಸಮುದಾಯದಲ್ಲಿ ಯಾರು ಎಷ್ಟು ಮಂದಿ ಇದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಬೇಕಿದೆ. ಎಡಗೈ ಸಮುದಾಯ, ಬಲಗೈ ಸಮುದಾಯ ಎಷ್ಟಿದೆ ಎನ್ನುವುದು ವೈಜ್ಞಾನಿಕವಾಗಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ ಎಂದು ಸಿಎಂ ಮಾಹಿತಿ ನೀಡಿದರು. ಈ ಸಮೀಕ್ಷೆಗೆ ಕನಿಷ್ಠ ಎಂದರೂ ನೂರು ಕೋಟಿ ರೂಪಾಯಿಗೂ ಅಧಿಕ ಖರ್ಚಾಗಲಿದೆ ಎಂದು ಹೇಳಿದರು.