Site icon Kannada News-suddikshana

ಸಂತೋಷ್ ಕುಮಾರ್ @ ಕಣುಮಾ ಹತ್ಯೆಗೆ ಎಷ್ಟು ಮಂದಿ ಬಂದಿದ್ದರು? ಎಸ್ಪಿ ಉಮಾ ಪ್ರಶಾಂತ್ ಹೇಳಿದ್ದೇನು?

SUDDIKSHANA KANNADA NEWS/ DAVANAGERE/ DATE-06-05-2025

ದಾವಣಗೆರೆ: ರೌಡಿಶೀಟರ್ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಕೊಲೆ ಮಾಡಿದ ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದ್ದು, ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ನಗರದ ಹದಡಿ ರಸ್ತೆಯಲ್ಲಿರುವ ಇಸ್ಪೀಟ್ ಕ್ಲಬ್ ಒಂದರಲ್ಲಿ ಬರ್ಬರವಾಗಿ ಹತ್ಯೆಗೀಡಾದ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಅವರನ್ನು ಏಳರಿಂದ ಎಂಟು ಮಂದಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದು, ವಿದ್ಯಾನಗರ ಪೊಲೀಸ್ ಠಾಣೆಯ ಡಿವೈಎಸ್ಪಿ ಶಿಲ್ಪಾ ಅವರ ನೇತೃತ್ವದಲ್ಲಿ ಟೀಂ ರಚಿಸಿದ್ದು, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ತಲವಾರು, ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ರೌಡಿಶೀಟರ್ ಆಗಿದ್ದ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಹತ್ಯೆಗೆ ಹಳೆ ವೈಷಮ್ಯ ಕಾರಣವಿರಬಹುದು. ಇಲ್ಲವೇ ಬೇರೆ ಯಾವ ಕಾರಣವಿದೆ ಎಂಬ ಕುರಿತಂತೆ ತನಿಖೆ ನಡೆಸಲಾಗುತ್ತಿದೆ. ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಮೇಲೆ ಬೆದರಿಕೆ, ಕೊಲೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಕೆಲವರು ಎಂಟರಿಂದ ಹತ್ತು ಮಂದಿ ಇದ್ದರು ಎಂದು ಹೇಳುತ್ತಾರೆ. ಮತ್ತೆ ಕೆಲವರು ಏಳರಿಂದ ಎಂಟು ಮಂದಿ ಇದ್ದರು ಎಂದು ಹೇಳುತ್ತಿದ್ದಾರೆ. ತನಿಖೆ ಬಳಿಕ ಎಷ್ಟು ಮಂದಿ ಇದ್ದಾರೆ ಎಂಬುದು ಗೊತ್ತಾಗಲಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ಹೇಳಿದ್ದಾರೆ.

Exit mobile version