ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಹಿಂಗಾರು ಬೆಳೆ ಸಮೀಕ್ಷೆ: ಮೊಬೈಲ್ ಆಪ್ ಮೂಲಕ ಬೆಳೆಯ ವಿವರ ದಾಖಲಿಸುವುದು ಹೇಗೆ?

On: January 1, 2025 10:05 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:01-01-2025

ಬಳ್ಳಾರಿ: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬೆಳೆಗಳ ಮಾಹಿತಿಯನ್ನು ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ಮಾಹಿತಿ ನಮೂದಿಸಲು ಅವಕಾಶವಿದ್ದು, ರೈತರು ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆಯಲ್ಲಿ ಬೆಳೆಯ ವಿವರ ದಾಖಲಿಸಿ, ಬೆಳೆಯ ನಿಖರ ಮಾಹಿತಿ ನಮೂದು ಮಾಡಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ.

ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ.

ಮೊಬೈಲ್ ಅಪ್ಲಿಕೇಷನ್ ಪಡೆಯಲು ಅನುಸರಿಸಬೇಕಾದ ಅಂಶಗಳು:

ರೈತರು ತಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇ-ಸ್ಟೋರ್‌ನಿಂದ ಬೆಳೆ ಸಮೀಕ್ಷೆ ಹಿಂಗಾರು ಹಂಗಾಮಿನ “ಫಾರ್ಮರ್ ಆಪ್ ಕ್ರಾಪ್ ಸರ್ವೇ ರಬಿ 2024” (Farmer App Crop Survey Rabi 2024) ಆಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

ಜಿಲ್ಲೆಯಲ್ಲಿ 242520 ಬೆಳೆ ತಾಕುಗಳಿದ್ದು, ಆ ತಾಕುಗಳಿಗೆ ರೈತರು ತಮ್ಮ ಬೆಳೆಗಳ ಮಾಹಿತಿಯನ್ನು ಸ್ವಯಂ ದಾಖಲಿಸಬೇಕು. ಮೊಬೈಲ್ ಆಪ್‌ನಲ್ಲಿ ಜಿಯೋ ರೆಫೆರೆನ್ಸ್ಡ್ ಅಂಡ್ ಡಿಜಿಟೈಜ್‌ಡ್ (Geo Referenced and Digitized) ಬೆಳೆ ಗ್ರಾಮ ನಕಾಶೆ ಅಳವಡಿಸಲಾಗಿರುವುದರಿಂದ ಆಯಾ ತಾಕಿನ ಗಡಿ ರೇಖೆಯೊಳಗೆ ಹೋಗಿ ಜಿಪಿಎಸ್ ನಿಖರತೆ ಪಡೆದು ಛಾಯಾಚಿತ್ರದೊಂದಿಗೆ ರೈತರು ಬೆಳೆಯ ವಿವರಗಳನ್ನು ಕಡ್ಡಾಯವಾಗಿ ದಾಖಲಿಸಬೇಕು.

ಬೆಳೆ ಸಮೀಕ್ಷೆ ದತ್ತಾಂಶ ಮಾಹಿತಿಯನ್ನು ಬೆಳೆ ವಿಸ್ತರಣೆ ಎಣಿಕೆ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗದಲ್ಲಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ, ಬೆಳೆಹಾನಿ ವರದಿ ಸಿದ್ಧಪಡಿಸಲು, ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆ, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಿಸಲು, ರಾಷ್ಟಿçÃಯ ಹಾಗೂ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಬೆಳೆ ಸಮೀಕ್ಷೆ ಮಾಹಿತಿಯನ್ನು ಉಪಯೋಗಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೃಷಿ, ತೋಟಗಾರಿಕೆ, ಪಿ.ಆರ್ ಅಥವಾ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment