Site icon Kannada News-suddikshana

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಅರ್ಜಿ

ದಾವಣಗೆರೆ: 2025-26ನೇ ಸಾಲಿನಲ್ಲಿ ಯಾವುದೇ ಕ್ಷೇತ್ರಗಳಲ್ಲಿ ಅಸಾಧಾರಣ ಪ್ರತಿಭೆಯೊಂದಿಗೆ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಸುದ್ದಿಯನ್ನೂ ಓದಿ: ಸಿದ್ಧಗಂಗಾ ಪರಿಸರ ಸ್ನೇಹಿ ಗಣಪ ಹರಿಹರದ ತುಂಗಾಭದ್ರೆಯ ಮಡಿಲಲ್ಲಿ ವಿಸರ್ಜನೆ

ಪ್ರತಿ ಕ್ಷೇತ್ರಕ್ಕೆ ಇಬ್ಬರು ಮಕ್ಕಳಂತೆ ಒಟ್ಟು 8 ಮಕ್ಕಳಿಗೆ ರೂ.10,000 ನಗದು ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು. ಈ ಪ್ರಶಸ್ತಿಗೆ ಆಯ್ಕೆ ಆಗುವಂತಹವರು ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಂಸ್ಕೃತಿ, ಸಂಗೀತ ಕ್ಷೇತ್ರಗಳಲ್ಲಿ ಅಪ್ರತಿಮ ಪ್ರತಿಭೆ ಉಳ್ಳವರಾಗಿದ್ದು, ಅವರು ಸಾಧಿಸಿದ ಪ್ರತಿಭೆಯ ಬಗ್ಗೆ ವೃತ್ತ ಪತ್ರಿಕೆಗಳಲ್ಲಿ ವರದಿಯಾಗಿರಬೇಕು ಅಥವಾ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪ್ರಮಾಣೀಕರಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.

ಅರ್ಜಿ ನಮೂನೆಯನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಪಡೆದು, ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಛೇರಿ, ಸರ್ಕಾರಿ ಬಾಲಕರ ಬಾಲಮಂದಿರ ಆವರಣ, ಎಂ.ಸಿ.ಸಿ.‘ಬಿ’ ಬ್ಲಾಕ್, ಕುವೆಂಪು ನಗರ, ದಾವಣಗೆರೆ. ದೂ.ಸಂ: 08192-264056 ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 23 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಉಪನಿರ್ದೇಶಕ ರಾಜಾನಾಯ್ಕ್ ತಿಳಿಸಿದ್ದಾರೆ.

Exit mobile version