Site icon Kannada News-suddikshana

ವಾಹನ ಸವಾರರೇ ಗಮನಿಸಿ : ನಾಳೆಯೊಳಗೆ ʻHSRPʼ ನಂಬರ್‌ ಪ್ಲೇಟ್‌ ಹಾಕಿಸದಿದ್ರೆ ದಂಡ ಬೀಳುತ್ತೆ ಹುಷಾರು!

ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರ ಈಗಾಗಲೇ ಹಲವು ಬಾರಿ ಅವಧಿ ವಿಸ್ತರಣೆ ಮಾಡಿ ಜೂನ್.‌ 12ಕ್ಕೆ ಗಡುವು ವಿಸ್ತರಿಸಿದೆ. ನಾಳೆಯೊಳಗೆ ನಂಬರ್‌ ಪ್ಲೇಟ್‌ ಅಳವಡಿಸದಿದ್ದರೆ ದಂಡ ವಿಧಿಸಿಸುವ ಸಾಧ್ಯತೆ ಇದೆ.

2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ರಾಜ್ಯದಲ್ಲಿ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಗತ್ಯವಿದೆ ಎಂದು ಸಾರಿಗೆ ಅಧಿಕಾರಿಗಳು ಅಂದಾಜಿಸಿದ್ದಾರೆ.

Exit mobile version