ನಾಸಿಕ್: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಚೇರಿಯಲ್ಲಿ ಬಲವಂತದ ಧಾರ್ಮಿಕ ಮತಾಂತರಕ್ಕೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ನಿದಾ ಖಾನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನಾಸಿಕ್ ರಸ್ತೆ ನ್ಯಾಯಾಲಯವು ಶನಿವಾರ ತಿರಸ್ಕರಿಸಿದೆ.
ಏಪ್ರಿಲ್ 29 ರಂದು ನಡೆದ ಇನ್-ಕ್ಯಾಮೆರಾ ವಿಚಾರಣೆಯ ನಂತರ ನ್ಯಾಯಾಲಯವು ಈ ಆದೇಶ ನೀಡಿದೆ.
ಆರೋಪಿಯು ಸಂತ್ರಸ್ತೆಯ ಮೇಲೆ ಧಾರ್ಮಿಕ ಪ್ರಭಾವ ಬೀರಿದ್ದಾರೆ, ಹಿಜಾಬ್ ಧರಿಸಲು ಪ್ರೇರೇಪಿಸಿದ್ದಾರೆ ಮತ್ತು ಧಾರ್ಮಿಕ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಲು ಸಹಾಯ ಮಾಡಿದ್ದಾರೆ ಎಂದು ಪ್ರಾಸಿಕ್ಯೂಷನ್ ವಾದಿಸಿದೆ.
ಅಲ್ಲದೆ, ಮಲೇಷ್ಯಾದಲ್ಲಿ ಉದ್ಯೋಗದ ಆಮಿಷ ಒಡ್ಡಿದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಡಿಜಿಟಲ್ ಪುರಾವೆ ಮತ್ತು ವಶಪಡಿಸಿಕೊಂಡ ದಾಖಲೆಗಳನ್ನು ಪರಿಗಣಿಸಿ ನ್ಯಾಯಾಲಯವು ಜಾಮೀನು ನಿರಾಕರಿಸಿದೆ.





Leave a comment