SUDDIKSHANA KANNADA NEWS/ DAVANAGERE/ DATE-27-06-2025
ದಾವಣಗೆರೆ: ಜವಾಹರ್ ಬಾಲ್ ಮಂಚ್ ಸಮಿತಿಯ ಸಹಯೋಗದೊಂದಿಗೆ ಜೂನ್ 30ರಂದು ನಗರದ ಜಯದೇವ ವೃತ್ತದಲ್ಲಿ ಮಾದಕ ವಸ್ತುಗಳು ಸಮಾಜಕ್ಕೆ ಹಾಗೂ ದೇಶಕ್ಕೆ ಮಾರಕ ಎಂಬ ಘೋಷವಾಕ್ಯದೊಂದಿಗೆ ಸಿದ್ಧಗಂಗಾ ಶಾಲಾ ಮಕ್ಕಳಿಂದ ಬೃಹತ್ ಮಾನವ ಸರಪಳಿ ಹಾಗೂ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿದೆ ಎಂದು ಮಂಚ್ ನ ದಾವಣಗೆರೆ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ರೇಣುಕಾಚಾರ್ಯ ಕೋಟ್ಯಂತರ ರೂ. ಪಡೆದಿದ್ದಕ್ಕೆ ದಾಖಲೆ ಇದೆ: ಶಿವಗಂಗಾಬಸವರಾಜ್ ಸ್ಫೋಟಕ ಆರೋಪ!
ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿರುವ ಜಾಥಾ ಹಾಗೂ ಮಕ್ಕಳ ಮಾನವ ಸರಪಳಿ ಕಾರ್ಯಕ್ರಮಕ್ಕೆ ದಾವಣಗೆರೆ ಲೋಕಸಭಾ ಕ್ಷೇತ್ರದ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಚಾಲನೆ ನೀಡಲಿದ್ದಾರೆ. ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ, ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲ್ ರಾವ್, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ದಾವಣಗೆರೆ ಮುರುಘಾ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ, ಜಿಲ್ಲಾ ಜವಾಹರ್ ಬಾಲ್ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.

ಇಂದಿನ ದಿನಗಳಲ್ಲಿ ಸಮಾಜಕ್ಕೆ ಹಾಗೂ ನಮ್ಮ ಮಕ್ಕಳ ಭವಿಷ್ಯಕ್ಕೆ ಮಾರಕವಾಗಿರುವ ಮಾದಕ ವಸ್ತುಗಳ ವಿರುದ್ಧ ಹೋರಾಡೋಣ. ಈ ಮೂಲಕ ಯುವಪೀಳಿಗೆಯಲ್ಲಿ ಜಾಗೃತಿ ಮೂಡಿಸೋಣ. ಈ ಜಾಥಾದಲ್ಲಿ ಪಕ್ಷದ ಎಲ್ಲಾ ಹಿರಿಯ ಮುಖಂಡರು, ಕಿರಿಯ ಮುಖಂಡರು, ಸರ್ಕಾರಿ ನಾಮನಿರ್ದೇಶಿತ ಸದಸ್ಯರು, ಚುನಾಯಿತ ಪ್ರತಿನಿಧಿಗಳು ಪಾಲ್ಗೊಳ್ಳಬೇಕೆಂದು ಮೊಹಮ್ಮದ್ ಜಿಕ್ರಿಯಾ ಅವರು ಮನವಿ ಮಾಡಿದ್ದಾರೆ.