SUDDIKSHANA KANNADA NEWS/ DAVANAGERE/ DATE:17-03-2024
ದಾವಣಗೆರೆ: ಹರಿಹರ ತಾಲೂಕಿನ ಮಲೇಬೆನ್ನೂರು ಪಟ್ಟಣದಲ್ಲಿ ಕಳೆದ ಮಾರ್ಚ್ 15 ರಂದು ಪಾನಿಪೂರಿ ಸೇವಿಸಿ 19 ಮಕ್ಕಳು ವಾಂತಿಭೇದಿಯಿಂದ ಅಸ್ವಸ್ಥರಾದ ಘಟನೆ ನಡೆದಿತ್ತು. ಈ ಪೈಕಿ ಬಿಲಾಲ್ ಎಂಬ ಏಳು ವರ್ಷದ ಬಾಲಕ ಬಾಪೂಜಿ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದ ಮೃತಪಟ್ಟಿದ್ದಾನೆ.
ಈ ಬಾಲಕನ ಕುಟುಂಬದವರಿಗೆ ನೆರವು ನೀಡುವ ಮೂಲಕ ಎಸ್. ಎಸ್. ಕೇರ್ ಟ್ರಸ್ಟ್ ನ ಆಜೀವ ಸದಸ್ಯೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮಾನವೀಯತೆ ಮೆರೆದಿದ್ದಾರೆ.
ಆಸ್ಪತ್ರೆ ಆವರಣದಲ್ಲಿ ಮೃತ ಬಾಲಕನ ಕುಟುಂಬ ವರ್ಗದವರ ರೋಧನೆ ಮುಗಿಲು ಮುಟ್ಟಿತ್ತು. ಆಸ್ಪತ್ರೆಗೆ ಆಗಮಿಸಿದ ಹರಿಹರ ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಹಾಗೂ ತುರ್ಚುಗಟ್ಟದ ರಿಯಾಜ್ ಅವರು ಬಾಲಕ ಮೃತಪಟ್ಟಿದ್ದು ಆಸ್ಪತ್ರೆಯ ಬಿಲ್ ನಲ್ಲಿ ರಿಯಾಯಿತಿ ನೀಡಲು ಎಸ್ ಎಸ್ ಕೇರ್ ಟ್ರಸ್ಟ್ ನ ಲೈಫ್ ಟ್ರಸ್ಟಿಯಾದಂತಹ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಸಂಪರ್ಕಿಸಿದರು. ವಿಷಯ ತಿಳಿದು ಆಸ್ಪತ್ರೆಗೆ ಬಿಲ್ ನಲ್ಲಿ ಪೂರ್ಣ ರಿಯಾಯಿತಿ ನೀಡುವ ಮೂಲಕ ಕುಟುಂಬ ವರ್ಗದವರ ನೋವಿನಲ್ಲಿ ಡಾ. ಪ್ರಭಾ ಭಾಗಿಯಾದರು.
ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಈ ಕಾರ್ಯಕ್ಕೆ ಕುಟುಂಬಕ್ಕೆ ಧನ್ಯವಾದ ಅರ್ಪಿಸಿದರು.