SUDDIKSHANA KANNADA NEWS/ DAVANAGERE/ DATE:13-04-2025
ದಾವಣಗೆರೆ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿರುವ ಶ್ರೀ ಹುಚ್ಚರಾಯಸ್ವಾಮಿ ದೇವರ ಜಾತ್ರಾ ಮಹೋತ್ಸವದಲ್ಲಿ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಹಾಗೂ ಇನ್ ಸೈಟ್ಸ್ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಜಿ. ಬಿ. ವಿನಯ್ ಕುಮಾರ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿದರು.
ಪ್ತತಿವರ್ಷವೂ ಹುಚ್ಚುರಾಯಸ್ವಾಮಿ ಜಾತ್ರಾ ಮಹೋತ್ಸವವು ವೈಭವೋಪೇತವಾಗಿ ನೆರವೇರುತ್ತದೆ. ಈ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಳ್ಳುತ್ತಾರೆ. ವಿನಯ್ ಕುಮಾರ್, ಅವರ ಪತ್ನಿ, ಮಕ್ಕಳು ಸಹ ಭೇಟಿ ನೀಡಿ ಹುಚ್ಚುರಾಯಸ್ವಾಮಿ ದೇವರ ಆಶೀರ್ವಾದ ಪಡೆದರು.
ವಿಜೃಂಭಣೆಯಿಂದ ನಡೆದ ಬ್ರಹ್ಮ ರಥೋತ್ಸವದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು. ಈ ವೇಳೆ ಹುಚ್ಚುರಾಯಸ್ವಾಮಿ ದೇವರ ಸನ್ನಿಧಿಗೆ ಬಂದಿದ್ದು ಖುಷಿ ಕೊಟ್ಟಿದೆ. ಈ ದೇವರ ಅನುಗ್ರಹ ಎಲ್ಲರ ಮೇಲಿರಲಿ. ಎಲ್ಲರಿಗೂ ಒಳಿತಾಗಲಿ ಎಂದು ಜಿ. ಬಿ. ವಿನಯ್ ಕುಮಾರ್ ಪ್ರಾರ್ಥಿಸಿದರು.