Site icon Kannada News-suddikshana

ಆಗ್ನೇಯ ಪದವೀಧರ ಕ್ಷೇತ್ರದಿಂದ ಸ್ಪರ್ಧೆಗೆ ಕಾಂಗ್ರೆಸ್ ಟಿಕೆಟ್ ಸಿಗುವ ವಿಶ್ವಾಸವಿದೆ: ಅನೀಸ್ ಪಾಷ

ಆಗ್ನೇಯ ಪದವೀಧರ ಕ್ಷೇತ್ರ

ದಾವಣಗೆರೆ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ 2026 ಮತದಾರರ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಅರ್ಹ ಮತದಾರರು ತಮ್ಮ ಹೆಸರನ್ನು ನೋಂದಣಿ ಮಾಡಿಸುವಂತೆ ವಕೀಲರು ಹಾಗೂ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಅನೀಸ್ ಪಾಷ ಮನವಿ ಮಾಡಿದರು.

READ ALSO THIS STORY: ಸ್ವಾತಂತ್ರ್ಯ ಹೋರಾಟಗಾರರ ಹೆಸರಿಡಲಿ: ದಿನೇಶ್ ಕೆ. ಶೆಟ್ಟಿಗೆ ಯಶವಂತರಾವ್ ಜಾಧವ್ ಸವಾಲು

ಪತ್ರಿಕಾಗೋಷ್ಛಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ಅಧಿಸೂಚನೆಯ ಪ್ರಕಾರ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಯಿಸಿಕೊಳ್ಳಲು ನವೆಂಬರ್ 6ನೇ ತಾರೀಖು ಕೊನೆ ದಿನ. 1-11-2022 ಕ್ಕೆ ಮುಂಚೆ ಪದವಿಯಲ್ಲಿ ತೇರ್ಗಡೆಹೊಂದಿರುವ ಪದವಿಧರರು ಅಥವಾ ಪದವಿಗೆ ಸಮಾನ ಡಿಪ್ಲೊಮಾ ಮಾಡಿದವರು ಘಟಿಕೋತ್ಸವ ಪ್ರಮಾಣ ಪತ್ರ ಅಥವಾ ಮೂರು ವರ್ಷದ ಪಾಸಾದ ಪದವಿಯ ಅಂಕಪಟ್ಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಇತ್ತೀಚಿನ 2 ಕಲರ್ ಭಾವಚಿತ್ರಗಳನ್ನೊಳಗೊಂಡ (ಬಿಳಿಯ ಬ್ಯಾಂಡ್) ಗಜೆಟೆಡ್ ಅಧಿಕಾರಿಗಳಿಂದ ದೃಢೀಕೃತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಕೋರಿದರು.

ಕಳೆದ 30 ವರ್ಷಗಳಿಂದ ದಾವಣಗೆರೆ ಜಿಲ್ಲೆ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ವಕೀಲನಾಗಿ ಕೆಲಸ ಮಾಡುತ್ತಿದ್ದು, ಬಡವರ, ರೈತರ, ಶೋಷಿತರ, ದಲಿತ ದಮನಿತರ ಹಾಗೂ ಧ್ವನಿ ಇಲ್ಲದವರ ಗಟ್ಟಿ ಧ್ವನಿಯಾಗಿ ಅವರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ. ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯವಾಗಿ ಕಾರ್ಯಕರ್ತನಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಪ್ರಗತಿಪರ ಸಂಘಟನೆಗಳಲ್ಲಿ ಮತ್ತು ಹೋರಾಟದಲ್ಲಿ ಮುಂಚೂಣಿಯಲ್ಲಿರುತ್ತಾ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಪಕ್ಷವು ನಾನು ಮಾಡಿರುವ ಸೇವೆಯನ್ನು ಗುರುತಿಸಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಉಪಾಧ್ಯಕ್ಷನಾಗಿ ಆಯ್ಕೆ ಮಾಡಿದ್ದು,ಆಗ್ನೇಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡುವ ವಿಶ್ವಾಸ ಇದೆ ಎಂದು ತಿಳಿಸಿದರು.

ಈಗಾಗಲೇ ಕೆಪಿಸಿಸಿ ಕರೆ ಮೇರೆಗೆ ಅಧಿಕೃತವಾಗಿ ಒಂದು ಲಕ್ಷ ಡಿಡಿಯನ್ನೊಳಗೊಂಡ ಅರ್ಜಿಯನ್ನು ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ಸಲ್ಲಿಸಿದ್ದೇನೆ. ಈ ಬಾರಿ ಪಕ್ಷವು ಟಿಕೆಟ್ ನೀಡುವ ವಿಶ್ವಾಸ ಇದೆ ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಅರುಣ್ ಕುಮಾರ್ ಸೇರಿದಂತೆ ವಕೀಲರು ಮತ್ತಿತರರು ಹಾಜರಿದ್ದರು.

Exit mobile version