SUDDIKSHANA KANNADA NEWS/ DAVANAGERE/ DATE-07-05-2025
ನವದೆಹಲಿ: ಪಹಲ್ಗಾಮ್ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿದ ‘ಆಪರೇಷನ್ ಸಿಂಧೂರ್’ ಬಗ್ಗೆ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದು, ಮುಗ್ಧ ಸಹೋದರರ ಹತ್ಯೆಗೆ ಪ್ರತೀಕಾರ ತೀರಿಸಿಕೊಂಡಿದ್ದೇವೆ ಎಂದು ಗುಡುಗಿದ್ದಾರೆ.
ಆಪರೇಷನ್ ಸಿಂಧೂರ್ ಬಳಿಕ ಫಸ್ಟ್ ರಿಯಾಕ್ಷನ್ ನೀಡಿರುವ ಅವರು “ಮುಗ್ಧ ಸಹೋದರರ” ಕ್ರೂರ ಹತ್ಯೆಗೆ ಪ್ರತಿಕ್ರಿಯೆಯಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಅಮಾಯಕ ಸಹೋದರರ ಕ್ರೂರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಹೇಳಿದ್ದೇವೆ. ಈಗ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದೇವೆ. ಉಗ್ರರ ಹೊಡೆದು ಹಾಕಿದ್ದೇವೆ ಎಂದು ಅಮಿತ್ ಶಾ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.