SUDDIKSHANA KANNADA NEWS/DAVANAGERE/DATE:06_01_2026
ಮೈಸೂರು: ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದರು.
ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದು ಕಾಲಘಟ್ಟ ಬೇರೆ ಬೇರೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದು ತಿಳಿಸಿದರು.





Leave a comment