SUDDIKSHANA KANNADA NEWS/ DAVANAGERE/ DATE:23-03-2025
ದಾವಣಗೆರೆ: ದಾವಣಗೆರೆ ಜಿಲ್ಲೆಯನ್ನು ವರ್ಲ್ಡ್ ಫೇಮಸ್ ಮಾಡುವೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ನಗರದ ಹಳೇ ಪಿಬಿ ರಸ್ತೆಯಲ್ಲಿನ ಖಬರಸ್ಥಾನದಲ್ಲಿ 25 ಲಕ್ಷ ಮೌಲ್ಯದ ವಜುಖಾನ ನಿರ್ಮಾಣದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಭಾಗಿಯಾಗಿದ್ದ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಮಾತನಾಡಿ ಹಿರಿಯ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಹಾಗೂ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರ ಕೊಡುಗೆಯು ಜಿಲ್ಲೆಗೆ ಅಪಾರವಾಗಿದೆ ಎಂದು ತಿಳಿಸಿದರು.
ಪ್ರಸ್ತುತ ಸಂಸದರ ಕೋಟದಡಿ 3 ಕೋಟಿ 25 ಲಕ್ಷ ಅನುದಾನ ಬಂದಿದ್ದು, ಖಬರಸ್ಥಾನ ಅಭಿವೃದ್ದಿಗೆ 25 ಲಕ್ಷ ಅನುದಾನ ನೀಡಲಾಗಿದೆ. ಮಹಿಳೆಯ ಮತ್ತು ಮಕ್ಕಳ ಆಸ್ಪತ್ರೆ, ರಸ್ತೆ, ಅರೋಗ್ಯ, ರೈತರ ಸಮಸ್ಯೆಗಳು, ಮೂಲಭೂತ ಸೌಲಭ್ಯಗಳು
ಹಾಗೂ ಸೌಕರ್ಯಗಳು ಸೇರಿದಂತೆ ಅನೇಕ ಕೊರತೆಗಳನ್ನು ನಿವಾರಿಸಲು 25 ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವಲ್ಲಿ ನಿಮ್ಮೆಲ್ಲ ಪಾತ್ರ ದೊಡ್ಡದಿದೆ. ದಾವಣಗೆರೆ ಜಿಲ್ಲೆಯನ್ನು ವರ್ಲ್ಡ್ ಫೇಮಸ್ ಮಾಡಲು ನಿಮ್ಮೆಲ್ಲರ ಸಹಕಾರವಿರಲಿ ಎಂದು ಹೇಳಿದರು.
ಹೊಸ ಚೈತನ್ಯದೊಂದಿಗೆ ಸರ್ವರು ಜಿಲ್ಲೆಯ ಅಭಿವೃದ್ಧಿಗೆ ಪಣತೊಡೋಣ ಎಂದು ಕರೆ ನೀಡಿದರು.
ವೇದಿಕೆಯಲ್ಲಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ, ತಂಜುಮುಲ್ ಮುಸ್ಲಿಂಮೀನ್ ಫಂಡ್ ಅಸೋಸಿಯೇಷನ್ ಅಧ್ಯಕ್ಷ ಜನಾಬ್ ಶೇಕ್ ದಾದಾಪೀರ್, ಮಾಜಿ ಮೇಯರ್ ಕೆ.ಚಮನ್ ಸಾಬ್, ಮಾಜಿ ಸದಸ್ಯರಾದ ಎ.ಬಿ ರಹೀಂ ಸಾಬ್, ಹರಿಹರದ ಕಾಂಗ್ರೆಸ್ ಪಕ್ಷದ ಮುಖಂಡ ನಂದಿಗಾವಿ ಶ್ರೀನಿವಾಸ್, ಮೌಲಾನ ಮಹಮ್ಮದ್ ಅಲಿಸಾಬ್, ಅಲ್ಲಮಾನ್ ನಿರಾಜ್, ಖಾದ್ರಿಸಾಬ್, ಮಸೀದ್ ಮೌಲಾನ, ನಜೀರ್ ಸಾಬ್, ಖಜಾಂಚಿ ಶಂಶುದ್ದಿನ್ ಸೇರಿದಂತೆ ತಂಜೀಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ ನ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು ಇತರರು ಉಪಸ್ಥಿತರಿದ್ದರು.