Site icon Kannada News-suddikshana

ಲೋಕಸಭೆಯಲ್ಲಿ 20ಕ್ಕಿಂತ ಕಡಿಮೆ ಸ್ಥಾನ ಬಂದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತೆ: ಶಾಸಕ ಶ್ರೀನಿವಾಸ್ ಸ್ಫೋಟಕ ಹೇಳಿಕೆ

SUDDIKSHANA KANNADA NEWS/ DAVANAGERE/ DATE:23-03-2024

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20 ಸ್ಥಾನ ಗೆಲ್ಲದಿದ್ದರೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಶಾಸಕ ಎಸ್. ಆರ್. ಶ್ರೀನಿವಾಸ್ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದೆ.

ಕಾರ್ಯಕ್ರಮವೊಂದರಲ್ಲಿ ಶಾಸಕ ಶ್ರೀನಿವಾಸ್ ಈ ಹೇಳಿಕೆ ನೀಡಿದ್ದಾರೆ. ಲೋಕಸಭೆ ಚುನಾವಣೆಯು ಕಾಂಗ್ರೆಸ್ ಪಕ್ಷದ ಪಾಲಿಗೆ ಮುಖ್ಯವಾದದ್ದು. ಸಿದ್ದರಾಮಯ್ಯ ಅವರಿಗೆ 20 ಸ್ಥಾನ ಗೆಲ್ಲಲೇಬೇಕಾದ ಒತ್ತಡ ಇದೆ. ಈ ಕಾರಣಕ್ಕೆ ಎಲ್ಲರೂ ಒಟ್ಟಾಗಿ ಚುನಾವಣೆ ಎದುರಿಸೋಣ. ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೆಚ್ಚಿನ ಸ್ಥಾನಗಳ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಕ್ಷವು ಲೋಕಸಭೆ ಚುನಾವಣೆಯಲ್ಲಿ
ಹೆಚ್ಚಿನ ಸ್ಥಾನ ಗೆಲ್ಲಬೇಕಾದ ಒತ್ತಡ ಸಿದ್ದರಾಮಯ್ಯರ ಮೇಲಿದೆ. ಅವರ ಕೈ ಬಲಪಡಿಸಬೇಕಾದರೆ ನಾವೆಲ್ಲರೂ ಒಟ್ಟಾಗಿ ದುಡಿಯಬೇಕು. ಬಿಜೆಪಿ – ಜೆಡಿಎಸ್ ಮೈತ್ರಿಕೂಟಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ಇನ್ನು ಸಂಸದ ಡಿ. ಕೆ. ಸುರೇಶ್ ಅವರು ಶ್ರೀನಿವಾಸ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಡಿಮೆ ಸ್ಥಾನ ಪಡೆದರೆ ಸಿಎಂ ರಾಜೀನಾಮೆ ನೀಡಬೇಕಾಗುತ್ತದೆ
ಎಂದು ಹೇಳಿರುವ ಕುರಿತಂತೆ ಮಾಹಿತಿ ಇಲ್ಲ. ಈ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದು ಹೇಳಿದ್ದಾರೆ.

Exit mobile version