Home ದಾವಣಗೆರೆ ಒಪಿಎಸ್ ಜಾರಿಗೆ ಹೋರಾಡೋಣ, ಬಂದ್ ಕರೆ ಕೊಟ್ಟಾಗ ಕೆಲಸ ಮಾಡಿದ್ರೆ ಎಳೆದು ಹೊರಗೆ ಕರೆದುಕೊಂಡು ಬರೋಣ: ಸಿ. ಎಸ್. ಷಡಕ್ಷರಿ ರೋಷಾಗ್ನಿ!
ದಾವಣಗೆರೆಬೆಂಗಳೂರು

ಒಪಿಎಸ್ ಜಾರಿಗೆ ಹೋರಾಡೋಣ, ಬಂದ್ ಕರೆ ಕೊಟ್ಟಾಗ ಕೆಲಸ ಮಾಡಿದ್ರೆ ಎಳೆದು ಹೊರಗೆ ಕರೆದುಕೊಂಡು ಬರೋಣ: ಸಿ. ಎಸ್. ಷಡಕ್ಷರಿ ರೋಷಾಗ್ನಿ!

Share
ಸಿ. ಎಸ್. ಷಡಕ್ಷರಿ
Share

ದಾವಣಗೆರೆ: ರಾಜ್ಯದಲ್ಲಿ ಒಪಿಎಸ್‌ನ್ನು ಜಾರಿಗೊಳಿಸಲು ಸರಕಾರವು ಕ್ರಮವಹಿಸದ್ದಿದ್ದರೆ ಅನಿವಾರ್ಯವಾಗಿ ಸರ್ಕಾರಿ ಕಚೇರಿಗಳನ್ನು ಬಂದ್‌ ಮಾಡುವ ಮೂಲಕ ಹೋರಾಟ ನಡೆಸಲು ಸಿದ್ಧ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಕ್ಷರಿ ಗುಡುಗಿದ್ದಾರೆ.

READ ALSO THIS STORY: BIG BREAKING: ದಾವಣಗೆರೆ ಸಿಂಥೆಟಿಕ್ ಡ್ರಗ್ಸ್ ಕೇಸಲ್ಲಿ ಬಂಧಿತರ ಸಂಖ್ಯೆ 11ಕ್ಕೇರಿಕೆ: ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಶಿವರಾಜ್ ಬಂಧನ!

ದಾವಣಗೆರೆಯಲ್ಲಿ ಕನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಜರುಗಿದ ಅಖಿಲ ಕರ್ನಾಟಕ ಎನ್ ಪಿಎಸ್ ನೌಕರರ ಸಂಘದ ರಾಜ್ಯಮಟ್ಟದ 2ನೇ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರವು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಓಪಿಎಸ್ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಸಂಘವು ನೌಕರರ ಹಿತ ಕಾಪಾಡಲು ಅನಿವಾರ್ಯವಾಗಿ ನಿಣಾರ್ಯಯಕ ಹಂತದಲ್ಲಿ ಕೆಲವು ದಿಟ್ಟ ನಿರ್ಧಾರ ಕೈಗೊಳ್ಳುವುದೆಂದರು.

ಸಂಘವು ರಾಜ್ಯ ನೌಕರರಿಗೆ ಕೇಂದ್ರ ಮಾದರಿ ವೇತನ ಶ್ರೇಣಿ ಮತ್ತು ಓಪಿಎಸ್ ಜಾರಿಗೊಳಿಸ ಬೇಕೆಂಬ ಪ್ರಮುಖ 2 ಅಂಶದ ಬೇಡಿಕೆಗಳ ಈಡೇರಿಕೆಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧವಾಗಿದೆ ಎಂದು ಸರ್ಕಾರಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ನೌಕರರ ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸಲಾಗುತ್ತಿದ್ದು ಈವರೆಗೂ 7ನೇ ವೇತನ ಆಯೋಗದ ವರದಿ ಅನುಷ್ಟಾನ, ಶಿಶುಪಾಲನಾ ರಜೆ, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ, ವೇತನ ಪ್ಯಾಕೇಜ್ ಅಕೌಂಟ್ ಮುಂತಾದ ನೌಕರರ ಪರವಾದ ಆದೇಶಗಳನ್ನು ಸರ್ಕಾರದಿಂದ ಮಾಡಿಸಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರಾದ ವೀರೇಶ್ ಎಸ್. ಒಡೇನಪುರ ಮಾತನಾಡಿ ರಾಜ್ಯದಲ್ಲಿ ನೌಕರರು ಓಪಿಎಸ್ ಜಾರಿಯಾಗುವ ವಿಶ್ವಾಸದಲ್ಲಿದ್ದಾರೆ. ರಾಜ್ಯಾಧ್ಯಕ್ಷ ಷಡಕ್ಷರಿಯವರು ಈ ಸಭೆಯಲ್ಲಿ ಗಟ್ಟಿ ನಿರ್ಧಾರ ಘೋಷಿಸಬೇಕೆಂದು ಒತ್ತಾಯಿಸಿದರು. ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಿದ್ದ ಅಖಿಲ ಕನಾಟಕ ಎನ್ ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ನಾಗನಗೌಡ ಸರ್ಕಾರದೊಂದಿಗೆ ಸಂಧಾನವಾದರೂ ಸರಿ, ಸಮರವಾದರೂ ಸರಿ, ಓಪಿಎಸ್ ಜಾರಿಯಾಗಲೇಬೇಕು. ಇದಕ್ಕಾಗಿ ಹೋರಾಟ ನಿರಂತರವಾಗಿರಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ತಮಿಳುನಾಡು ರಾಜ್ಯದ ಎನ್ ಪಿ ಎಸ್ ನೌಕರರ ಸಂಘದ ಸೆಲ್ವಕುಮಾರ್, ಫ್ರೆಡ್ರಿಕ್ ಏಂಜಲ್, ಅಖಿಲ ಕನಾಟಕ ಎನ್ ಪಿಎಸ್ ನೌಕರರ ಸಂಘದ ಗೌರವ ಸಲಹೆಗಾರರಾದ ರುದ್ರಪ್ಪ, ಕಾರ್ಯಾಧ್ಯಕ್ಷ ಸದಾನಂದ ನೆಲ್ಕುದ್ರಿ, ಕಾರ್ಯದಶ್ರಿ ಚಂದ್ರಶೇಖರ್ ಅಖಿಲ ಕನಾಟಕ ಎನ್ ಪಿಎಸ್ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಿವಣ್ಣ ಸೇರಿದಂತೆ ಎಲ್ಲಾ ಜಿಲ್ಲಾಧ್ಯಕ್ಷರು ಹಾಗೂ ಸರ್ಕಾರಿ ನೌಕರರ ಸಂಘ ವಿವಿಧ ಹಂತದ ಪದಾಧಿಕಾರಿಗಳು ಹಾಜರಿದ್ದರು.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles
ಗಣೇಶ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಮಸೀದಿ ಮುಂದೆ ಗಣೇಶ ಮೆರವಣಿಗೆ ನಿರ್ಬಂಧಿಸಿದರೆ ಠಾಣೆಗೆ ನುಗ್ಗುತ್ತೇನೆ: ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೇ ರೌಡಿಗೆ ಜೈಲು ಗ್ಯಾರಂಟಿ ಎಂದ್ರು ಪ್ರಿಯಾಂಕ್ ಖರ್ಗೆ! ಬೆಂಗಳೂರು ಮೈಸೂರು:ಗಣೇಶೋತ್ಸವ ಮೆರವಣಿಗೆಯ ವೇಳೆ ಮಸೀದಿ ಮುಂಭಾಗ ಹಾದುಹೋಗುವ ಮಾರ್ಗ ಹಾಗೂ ಧ್ವನಿವರ್ಧಕಗಳ ಬಳಕೆಯ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯ ಹೇಳಿಕೆಗೆ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಸಾರ್ವಜನಿಕ ಸಭೆಯಲ್ಲಿ ಬ್ರಿಟಿಷರ ಕಾಲದ ದರ್ಪ ಪ್ರದರ್ಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ಯುವಕರು ಮತ್ತು ಸಾರ್ವಜನಿಕರನ್ನು ಬೆದರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಮಸೀದಿ ಮುಂದೆ ಯುವಕರು ನೃತ್ಯ ಮಾಡಿದರೆ ಅಥವಾ ಮೆರವಣಿಗೆ ಸಾಗಿದರೆ ತಪ್ಪೇನು?” ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಅವರು, “ಪುಂಡಾಟಿಕೆ ಮಾಡುವುದು ಮತ್ತು ಕಲ್ಲು ತೂರುವ ಕೆಲಸಗಳನ್ನು ಯಾರು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ, ಹಿಂದೂಗಳು ಎಂದಿಗೂ ಈ ರೀತಿಯ ಕೆಲಸಗಳನ್ನು ಮಾಡಿಲ್ಲ. ಮಸೀದಿಗಳಿಂದ ದಿನಕ್ಕೆ ಐದು ಬಾರಿ ಬರುವ ಧ್ವನಿವರ್ಧಕಗಳ ಕೂಗು ಹಿಂದೂಗಳ ಮನೆಗೆ ಕೇಳಿಸದಂತೆ ಮಾಡುವ ಧೈರ್ಯ ಪೊಲೀಸರಿಗಿದೆಯೇ? ಅದನ್ನು ಬಿಟ್ಟು ಹಬ್ಬ ಆಚರಿಸುವ ಹಿಂದೂ ಯುವಕರಿಗೆ ಧಮ್ಕಿ ಹಾಕುವುದು ಸರಿಯಲ್ಲ. ಟಿ. ನರಸೀಪುರ ಇನ್ಸ್‌ಪೆಕ್ಟರ್ ಇನ್ನೊಮ್ಮೆ ಈ ರೀತಿ ಬಾಲ ಅಲ್ಲಾಡಿಸಿದರೆ ಅಥವಾ ಬೆದರಿಕೆ ಹಾಕಿದರೆ ನಾನೇ ನೇರವಾಗಿ ಠಾಣೆಗೆ ನುಗ್ಗುತ್ತೇನೆ” ಎಂದು ಖಡಕ್ ಸವಾಲು ಹಾಕಿದರು. ಇತ್ತೀಚಿನ ಗಣೇಶ ವಿಸರ್ಜನೆ ಮೆರವಣಿಗೆಯ ಸಿದ್ಧತೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ನಡುವೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೈಸೂರಿನಲ್ಲೊಬ್ಬ ರೌಡಿ ಇದ್ದಾನೆ. ಆತನಿಗೆ ಪರಪ್ಪನ ಆಗ್ರಹಾರಕ್ಕೆ ನುಗ್ಗಿಸುತ್ತೇವೆ. ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲ್ಲ ಎಂದಿದ್ದಾರೆ. ಇದು ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಸಮರಕ್ಕೆ ಕಾರಣವಾಗಿದೆ.