ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ವಾಹನ ಸವಾರರೇ ಎಚ್ಚರ.. ಎಚ್ಚರ… ಸಿಸಿ ಟಿವಿ ಕಣ್ಗಾವಲಿದೆ: ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ದಂಡ…!

On: February 6, 2025 9:45 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:06-02-2025

ದಾವಣಗೆರೆ: ದಾವಣಗೆರೆ ಸ್ಮಾರ್ಟ್ ಸಿಟಿಯಾಗಿದ್ದು ನಗರದಲ್ಲಿ ಸುಸಜ್ಜಿತವಾಗ ರಸ್ತೆಗಳ ನಿರ್ಮಾಣವಾಗಿದೆ. ಸಂಚಾರಿ ನಿಯಮಗಳ ಪಾಲನೆಗಾಗಿ ಸಿಗ್ನಲ್ ಅಳವಡಿಕೆ ಮಾಡಿದ್ದರೂ ಉಲ್ಲಂಘನೆ ಮಾಡಿ ಸಂಚರಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು ನಿಯಮ ಪಾಲನೆ ಮಾಡದ ಸವಾರರಿಗೆ ದಂಡ ಅನಿವಾರ್ಯ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ.

ದಾವಣಗೆರೆ ನಗರದ ಶಾಮನೂರು ರಿಂಗ್ ರಸ್ತೆಯಲ್ಲಿನ ಶಾರದಾಂಬ ದೇವಸ್ಥಾನ ಬಳಿಯ ಹಾಗೂ ರವೀಂದ್ರನಾಥ ವೃತ್ತ ಸೇರಿದಂತೆ ಇನ್ನಿತರೆ ವೃತ್ತಗಳಲ್ಲಿ ಗುರುವಾರ ಬೆಳಗ್ಗೆ 9 ಗಂಟೆಯ ವೇಳೆಯಲ್ಲಿ ಸಿಗ್ನಲ್ ಜಂಪ್ ಮಾಡಿ ಸಂಚರಿಸಿದ ಸವಾರರಿಗೆ ಒಂದೇ ಗಂಟೆಯಲ್ಲಿ 10 ಸಾವಿರಕ್ಕಿಂತಲೂ ಹೆಚ್ಚಿನ ದಂಡ ಹಾಕಲಾಗಿದೆ.

ಕೆಲವು ದ್ವಿಚಕ್ರ ವಾಹನ ಸವಾರರು ವಿಮುಖವಾಗಿ ಸಂಚರಿಸುವುದು ಕಂಡು ಬರುತ್ತಿದ್ದರೆ, ಕೆಲವು ವಾಹನ ಸವಾರರು ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವುದನ್ನು ಗಮನಿಸಲಾಗಿದೆ.ಯಾವುದೇ ಸೂಚನೆಯನ್ನು ನೀಡದೇ ಮತ್ತು ಹಿಂದಿನ ವಾಹನಗಳನ್ನು ಗಮನಿಸದೇ ತಿರುವು ಪಡೆಯುವುದು ಸಹ ಅಪಘಾತಕ್ಕೆ ಕಾರಣವಾಗಿದ್ದು ಅಪಘಾತಗಳನ್ನು ಗಣನೀಯವಾಗಿ ತಗ್ಗಿಸುವ ಉದ್ದೇಶದಿಂದ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಅನುಷ್ಟಾನ ಮಾಡಲಾಗುತ್ತಿದೆ. ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುವವರು ಸೇರಿದಂತೆ ವೃತ್ತಗಳಲ್ಲಿ ಸಿಗ್ನಲ್ ಜಂಪ್ ಮಾಡಿ ಸಂಚರಿಸಿದಲ್ಲಿ ದಂಡ ಕಟ್ಟಿಟ್ಟಬುತ್ತಿಯಾಗಿದೆ.

ಸ್ಮಾರ್ಟ್‍ಸಿಟಿ ಕಮಾಂಡ್ ಸೆಂಟರ್‍ನಲ್ಲಿ ಸೆರೆ; ವಾಹನ ಸವಾರರು ಸಿಗ್ನಲ್ ಜಂಪ್ ಮಾಡುವುದು ಸೇರಿದಂತೆ ಯಾವುದೇ ಉಲ್ಲಂಘನೆಯ ಪ್ರಕರಣಗಳು ಕಂಡು ಬಂದಲ್ಲಿ ಅದೆಲ್ಲವೂ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುತ್ತದೆ. ನಗರದಲ್ಲಿ 525 ಕ್ಕೂ ಹೆಚ್ಚು ಹೈ ರೆಜುಲೂಷನ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರ ಸಂಪೂರ್ಣ ಡಾಟಾವನ್ನು ಸಂರಕ್ಷಣೆ ಮಾಡಲಾಗುತ್ತದೆ. ಯಾವುದೇ ವೃತ್ತ, ರಸ್ತೆಯಲ್ಲಿ ಸಂಚಾರಿ ನಿಯಮಗಳು ಉಲ್ಲಂಘನೆಯಾದರೂ ಸೆರೆಯಾಗುತ್ತದೆ.

ಸಂಚಾರಿ ನಿಯಮ ಜಾಗೃತಿ; ಜಿಲ್ಲೆಯಲ್ಲಿ ಕಳೆದ ವರ್ಷದಲ್ಲಿ 300 ಕ್ಕಿಂತ ಹೆಚ್ಚು ಜನರು ಅಪಘಾತ ಪ್ರಕರಣಗಳಲ್ಲಿ ಅಸುನೀಗಿದ್ದು ಇದು ಈ ವರ್ಷ ತಗ್ಗಿದೆ. ಅಪಘಾತ ಪ್ರಕರಣಗಳನ್ನು ಎರಡಂಕಿಗೆ ಇಳಿಸುವ ಉದ್ದೇಶದಿಂದ ಸಂಚಾರಿ ನಿಯಮಗಳ ಪಾಲನೆಯನ್ನು ಕಠಿಣಗೊಳಿಸಲಾಗುತ್ತಿದೆ. ಈಗಾಗಲೇ ಆಟೋ ಚಾಲಕರು, ಖಾಸಗಿ ಶಾಲಾ ಬಸ್ ಚಾಲಕರು, ಕೆಎಸ್‍ಆರ್‍ಟಿಸಿ ಬಸ್ ಚಾಲಕರ ಸಭೆ ಮಾಡಿ ಅರಿವು ಮೂಡಿಸಲಾಗಿದೆ. ನಗರದಲ್ಲಿ ವಿವಿಧ ಆಟೋ ಸಂಘಗಳೊಂದಿಗೂ ಮತ್ತು ಗೂಡ್ಸ್ ಆಟೋ, ಲಾರಿ ಮಾಲೀಕರ ಸಂಘಗಳೊಂದಿಗೂ ಸಭೆ ನಡೆಸುವ ಮೂಲಕ ಜಾಗೃತಿ ಮೂಡಿಸಲಾಗುತ್ತದೆ ಎಂದು ತಿಳಿಸಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment