ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆಯಲ್ಲಿ ರಾತ್ರಿ ಮತ್ತು ಮುಂಜಾನೆ ರಸ್ತೆ ಬದಿ, ಖಾಲಿ ನಿವೇಶನಗಳಲ್ಲಿ ಕಸ ಹಾಕಿದರೆ ಬೀಳುತ್ತೆ 500 ರೂ. ದಂಡ!

On: November 4, 2025 6:46 PM
Follow Us:
ದಾವಣಗೆರೆ
---Advertisement---

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ನಗರವು ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆಯಲು ಪಾಲಿಕೆ ಮತ್ತು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿರುತ್ತಾರೆ. ಆದಾಗ್ಯೂ, ನಗರದ ಇನ್ನು ಹಲವು ಭಾಗದಲ್ಲಿ ಹಸಿಕಸ- ಒಣಕಸ-ಸ್ಯಾನಿಟರಿ ಕಸಗಳನ್ನು ವಿಂಗಡಣೆ ಮಾಡದೇ ಇರುವುದು, ಕಸ ಸಂಗ್ರಹಣಾ ವಾಹನಗಳಿಗೆ ಕಸ ನೀಡದೇ ರಾತ್ರಿ ಮತ್ತು ಮುಂಜಾನೆ ರಸ್ತೆ ಬದಿ, ಖಾಲಿ ನಿವೇಶನಗಳಲ್ಲಿ ಕಸ ಎಸೆಯುತ್ತಿರುವ ಪ್ರಕರಣಗಳು ಕಂಡು ಬಂದಿವೆ.

ಈ ಸುದ್ದಿಯನ್ನೂ ಓದಿ: ಬೇನಾಮಿ ಹೆಸರಿನಲ್ಲಿ ಎಸ್. ಎಸ್. ಮಲ್ಲಿಕಾರ್ಜುನ್ ಜಮೀನು ಖರೀದಿ: ರೈತರ ಗಂಭೀರ ಆರೋಪ!

ಸ್ವಚ್ಛ ಭಾರತ ಮಿಷನ್-2.0 ರಡಿ ಸ್ವ-ಸಹಾಯ ಗುಂಪುಗಳ ಸದಸ್ಯರುಗಳನ್ನು, ಸಮುದಾಯ ಸಂಚಾಲಕರು ಎಂದು ಪ್ರತಿ ತ್ಯಾಜ್ಯ ಸಂಗ್ರಹಣಾ ವಾಹನಗಳೊಂದಿಗೆ ನೇಮಕ ಮಾಡಲಾಗಿದೆ.

ತ್ಯಾಜ್ಯ ವಿಂಗಡಣೆ ಮಾಡದೇ ಇರುವ ಹಾಗೂ ಕಸ ಸಂಗ್ರಹಣಾ ವಾಹನಗಳಿಗೆ ಕಸ ನೀಡದೇ ಇರುವಂತಹ ಮನೆ, ಉದ್ದಿಮೆದಾರರುಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಪ್ರಾರಂಭಿಕವಾಗಿ ನಗರದ ಸ್ವಚ್ಚತೆಗೆ ಧಕ್ಕೆಯುಂಟಾಗುವಂತೆ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸುತ್ತಿರುವವರಿಗೆ ತಿಳುವಳಿಕೆ ನೀಡಿ, ನಂತರವೂ ಉಲ್ಲಂಘನೆ ಮುಂದುವರೆಸಿದಲ್ಲಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಗಳ ತ್ಯಾಜ್ಯ ನಿರ್ವಹಣೆ ಉಪ ವಿಧಿಗಳಲ್ಲಿರಡಿ ಪ್ರತಿ ಉಲ್ಲಂಘನೆಗೆ ರೂ. 100 ರಿಂದ ರೂ. 500ವರೆಗೆ ದಂಡ ವಿಧಿಸಲಾಗುವುದು.

ದಂಡ ಪಾವತಿಸದೇ ಇದ್ದಲ್ಲಿ ದಂಡದ ಮೊತ್ತವನ್ನು ಆಸ್ತಿ ತೆರಿಗೆ ಬಾಕಿ ರೂಪದಲ್ಲಿ ವಸೂಲಿ ಮಾಡಲಾಗುವುದು. ಮನೆಗಳನ್ನು ಬಾಡಿಗೆ ನೀಡಿರುವಂತಹ ಮನೆ ಮಾಲೀಕರು ಬಾಡಿಗೆದಾರರುಗಳಿಗೆ ತ್ಯಾಜ್ಯ ವಿಂಗಡಣೆ ಮತ್ತು ನಿರ್ವಹಣೆ ಬಗ್ಗೆ ಅಗತ್ಯ ಷರತ್ತು ವಿಧಿಸಿ ಸಮರ್ಪಕ ತ್ಯಾಜ್ಯ ನಿರ್ವಹಣೆಗೆ ಪಾಲಿಕೆಯೊಂದಿಗೆ ಕೈಜೋಡಿಸಿಸುವುದು. ತಪ್ಪಿದಲ್ಲಿ ಬಾಡಿಗೆದಾರರುಗಳಿಂದ ತ್ಯಾಜ್ಯ ನಿರ್ವಹಣೆ ನಿಯಮಗಳ ಉಲ್ಲಂಘನೆಗೆ ಮನೆ ಮಾಲೀಕರಿಂದ ಆಸ್ತಿ ತೆರಿಗೆ ಬಾಕಿ ರೂಪದಲ್ಲಿ ದಂಡ ವಿಧಿಸಲಾಗುವುದು.

ಸಾರ್ವಜನಿಕರು ಉತ್ಪತ್ತಿಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಂಗಡಿಸಿ ನಗರದ ಸ್ವಚ್ಛತೆಗೆ ಹಾಗೂ ಭವಿಷ್ಯಳಿಗೆಯ ಆರೋಗ್ಯಕರ ಪರಿಸರಕ್ಕೆ ಸಹಕರಿಸುವುದು ಹಾಗೂ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಕಪ್‍ಗಳಂತಹ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಲ್ಲಿಸಿ,
ತ್ಯಾಜ್ಯ ಉತ್ಪಾದನೆಯನ್ನುತಗ್ಗಿಸುವಂತೆ ಹಾಗೂ ಬೀದಿಬದಿ ಕಾಫೀ, ಟೀ ಮಾರಾಟಗಾರರು ಕಡ್ಡಾಯವಾಗಿ ಪ್ಲಾಸ್ಟಿಕ್, ಪೇಪರ್ ಕಪ್‍ಗಳನ್ನು ಬಳಸಬಾರದು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment