Site icon Kannada News-suddikshana

ಅಕ್ರಮವಾಗಿ ಗಾಂಜಾ ಮಾರಾಟ:ಸಂಗ್ರಹಿಸಿಟ್ಟಿದ್ದ 1 ಕೆಜಿ 148 ಗ್ರಾಂ ಗಾಂಜಾ ವಶ

SUDDIKSHANA KANNADA NEWS/ DAVANAGERE/ DATE-25-06-2025

ದಾವಣಗೆರೆ: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ವ್ಯಕ್ತಿಯೊಬ್ಬ ಸಂಗ್ರಹಿಸಿಟ್ಟಿದ್ದು, ಒಂದು ಕೆಜಿ 148 ಗ್ರಾಂ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಸಂತೇಬೆನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಚನ್ನಗಿರಿ ತಾಲ್ಲೂಕು ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಳೆನೂರು ಗ್ರಾಮದ ಹನುಮಂತಪ್ಪ ಎಂಬುವರ ಮಾವಿನ ತೋಟದಲ್ಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹವಾಗಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಸಂತೆಬೆನ್ನೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಲಿಂಗನಗೌಡ ನೆಗಳೂರು ಅವರ ಮುಂದಾಳತ್ವದಲ್ಲಿ ಸಂತೇಬೆನ್ನೂರು ಪೊಲೀಸ್ ಠಾಣೆಯ ಪಿಎಸ್ಐ ಜಗದೀಶ್ ಜಿ (ಕಾ&ಸು) ರವರ ನೇತೃತ್ವದಲ್ಲಿ ಚನ್ನವೀರಪ್ಪ (ತನಿಖೆ) ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ದಾಳಿ ನಡೆಸಿತು.

ದಾಳಿ ವೇಳೆ ಅಕ್ರಮವಾಗಿ ಗಾಂಜಾ ಸಂಗ್ರಹ ಮಾಡಿದ್ದ ಆರೋಪಿತನಾದ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದ ಜಾಕೀರ್ (53)ನನ್ನು ಬಂಧಿಸಿದ್ದು, ಅಕ್ರಮವಾಗಿ ಗಾಂಜ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ 1,20.000 ರೂ ಮೌಲ್ಯದ 1 ಕೆಜಿ 150 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದಲ್ಲಿ ಆರೋಪಿತರ ಬಂಧನ ಹಾಗೂ ಅಕ್ರಮ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಸಂತೆಬೆನ್ನೂರು ವೃತ್ತದ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಎಸ್ಪಿ ಉಮಾ ಪ್ರಶಾಂತ್
ಅವರು ಅಭಿನಂದಿಸಿದ್ದಾರೆ.

Exit mobile version