SUDDIKSHANA KANNADA NEWS/ DAVANAGERE/ DATE:28-02-2024
ದಾವಣಗೆರೆ: ಫೆ. 29ರಂದು ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ದಾವಣಗೆರೆ ನಗರ ಉಪವಿಭಾಗ 2 ರ ವ್ಯಾಪ್ತಿಯ 66/11 ಕೆವಿ ಅವರಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್18-ದುರ್ಗಾಂಬಿಕಾ ಫೀಡರ್ ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿದೆ.
ಈ ಹಿನ್ನೆಲೆಯಲ್ಲಿ ಫೆ.29 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಂ.ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ, ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆಂದು ಬೆಸ್ಕಾಂ ತಿಳಿಸಿದೆ.