Home ದಾವಣಗೆರೆ ದೆಹಲಿಯಲ್ಲಿ ‘ಇಂಡಿಯಾ’ ಒಕ್ಕೂಟದ ಕಾಳಗ: ಬ್ಯಾರಿಕೇಡ್ ಏರಿ ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ!
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ದೆಹಲಿಯಲ್ಲಿ ‘ಇಂಡಿಯಾ’ ಒಕ್ಕೂಟದ ಕಾಳಗ: ಬ್ಯಾರಿಕೇಡ್ ಏರಿ ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ!

Share
ಇಂಡಿಯಾ
Share

ನವದೆಹಲಿ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ ಮತ್ತು ಸಂವಿಧಾನ ಬದ್ಧ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ, ‘ಇಂಡಿಯಾ’  ಒಕ್ಕೂಟದ ನಾಯಕರು ಮಂಗಳವಾರ ನವದೆಹಲಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕೇಂದ್ರ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಂಸತ್ ಭವನದ ಮಕಾರ್ ದ್ವಾರದಿಂದ ಚುನಾವಣಾ ಆಯೋಗದ ಪ್ರಧಾನ ಕಚೇರಿಯತ್ತ ಹೊರಟಿದ್ದ ಪ್ರತಿಭಟನಾಕಾರರನ್ನು ಆಕಾಶವಾಣಿ ಭವನದ ಬಳಿ ದೆಹಲಿ ಪೊಲೀಸರು ತಡೆದರು.

ಮೆರವಣಿಗೆ ತಡೆದ ಹಿನ್ನೆಲೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ತೃಣಮೂಲ ಕಾಂಗ್ರೆಸ್‌ನ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಹಲವು ಹಿರಿಯ ನಾಯಕರು ರಸ್ತೆಯಲ್ಲೇ ಧರಣಿ ಕುಳಿತರು. ಈ ವೇಳೆ ಪೊಲೀಸರ ಬ್ಯಾರಿಕೇಡ್ ಏರಿ ರಾಷ್ಟ್ರಧ್ವಜ ಹಾರಿಸಿದ ರಾಹುಲ್ ಗಾಂಧಿ, “ಇದು ರಾಜಕೀಯ ಹೋರಾಟವಲ್ಲ, ಸಂವಿಧಾನ ಮತ್ತು ‘ಒಬ್ಬ ವ್ಯಕ್ತಿ-ಒಂದು ಮತ’ ತತ್ವವನ್ನು ಉಳಿಸುವ ಹೋರಾಟ” ಎಂದು ಪ್ರತಿಪಾದಿಸಿದರು.

ಅಖಿಲೇಶ್ ಯಾದವ್ ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೊಂದೆಡೆ, ಕೇಂದ್ರ ಸಚಿವ ಕಿರಣ್ ರಿಜಿಜು ಈ ಪ್ರತಿಭಟನೆಯನ್ನು ಖಂಡಿಸಿದ್ದು, “ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ವಿದೇಶಿ ವಿರೋಧಿ ಶಕ್ತಿಗಳ ನಿರೂಪಣೆಯನ್ನು ಬೆಂಬಲಿಸುತ್ತಾ ರಾಜಕೀಯ ನಾಟಕವಾಡುತ್ತಿವೆ” ಎಂದು ವಾಗ್ದಾಳಿ ನಡೆಸಿದ್ದಾರೆ. ಆದರೆ, ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ‘ಇಂಡಿಯಾ’ ಒಕ್ಕೂಟ ಸ್ಪಷ್ಟಪಡಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles