• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Monday, May 19, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಭಯೋತ್ಪಾದಕರಿಗೆ ಭಾರತೀಯ ಸೇನೆ ತಕ್ಕ ಉತ್ತರ: ಕಾಂಗ್ರೆಸ್ ಶಾಸಕ ಕೆ. ಎಸ್. ಬಸವಂತಪ್ಪ

Editor by Editor
May 10, 2025
in ದಾವಣಗೆರೆ
0
ಭಯೋತ್ಪಾದಕರಿಗೆ ಭಾರತೀಯ ಸೇನೆ ತಕ್ಕ ಉತ್ತರ: ಕಾಂಗ್ರೆಸ್ ಶಾಸಕ ಕೆ. ಎಸ್. ಬಸವಂತಪ್ಪ

SUDDIKSHANA KANNADA NEWS/ DAVANAGERE/ DATE-10-05-2025

ದಾವಣಗೆರೆ: ಅಮಾಯಕ ಭಾರತೀಯರ ಪ್ರಾಣ ತೆಗೆದು ಇಡೀ ದೇಶ ಕಣ್ಣೀರು ಹಾಕುವಂತೆ ಮಾಡಿದ್ದ ಭಯೋತ್ಪಾದಕರಿಗೆ ಭಾರತೀಯ ಸೇನೆ ತಕ್ಕ ಉತ್ತರ ನೀಡುತ್ತಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ತಾಲೂಕಿನ ಮಾಯಕೊಂಡ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಶ್ರೀಆಂಜನೇಯಸ್ವಾಮಿ ದೇವಸ್ಥಾನ ಉದ್ಘಾಟನೆ ಮತ್ತು ಕಳಸಾರೋಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈಗ ಪಾಕಿಸ್ತಾನ ಮತ್ತು ಭಾರತ ಮಧ್ಯೆ ಯುದ್ಧ ನಡೆಯುತ್ತಿದೆ. ಯುಧವನ್ನು ನಾವು ಬಯಸಿರಲಿಲ್ಲ. ಅದನ್ನು ಬಯಸಿದ್ದು ಪಾಕಿಸ್ತಾನ. ಏಕೆಂದರೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಹಿಂದೂಗಳ ಮೇಲೆ ಉಗ್ರರು ನಡೆಸಿದ ನರಮೇಧಕ್ಕೆ ಇಡೀ ಭಾರತ ಕಣ್ಣೀರು ಹಾಕಿತು. ಈ ದುಷ್ಕೃತ್ಯದಿಂದ ಭಯೋತ್ಪಾದನೆ ನಿರ್ಮೂಲನೆಗೆ ಕೇಂದ್ರ ಸರ್ಕಾರ ಕಠಿಣ ನಿಲುವು ತೆಗೆದುಕೊಂಡಿದ್ದು, ಇದಕ್ಕೆ ವಿಪಕ್ಷಗಳು ಸಂಪೂರ್ಣ ಬೆಂಬಲ ನೀಡಿವೆ. ಇದರ ಪರಿಣಾಮ ಪಾಕಿಸ್ತಾನದ ಭಯೋತ್ಪಾದಕ ತಾಣಗಳನ್ನು ನಮ್ಮ ಯೋಧರು ಧ್ವಂಸ ಮಾಡುತ್ತಿದ್ದಾರೆ ಎಂದರು.

ಪಾಕಿಸ್ತಾನ ಹುಟ್ಟು ಹಾಕಿರುವ ಭಯೋತ್ಪಾದನೆಯನ್ನು ಸಂಪೂರ್ಣ ನಿರ್ನಾಮ ಮಾಡುವ ಶಕ್ತಿಯನ್ನು ನಮ್ಮ ಯೋಧರಿಗೆ ದೇಶದ 140 ಕೋಟಿ ಜನರು ಬೆಂಬಲ ನೀಡಬೇಕಿದೆ. ದೇಶದ ಒಳತಿಗಾಗಿ ಎಲ್ಲರೂ ಒಗ್ಗಟ್ಟಾಗಿ ಸೈನಿಕರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಜೊತೆಗೆ ಸೈನಿಕರಿಗೆ ಆತ್ಮಸ್ಥೈರ್ಯ, ಅವರ ಪ್ರಾಣ ರಕ್ಷಣೆ ಮಾಡುವಂತೆ ಶ್ರೀಆಂಜನೇಯಸ್ವಾಮಿ ಪ್ರಾರ್ಥಿಸಿದರು.

ಕೆರೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು:

ಮಾಯಕೊಂಡ ಕ್ಷೇತ್ರದಲ್ಲಿ ಅಂತರ್ಜಲ ಮಟ್ಟ ಹೆಚ್ಚಳ ದೃಷ್ಟಿಯಿಂದ ಕೆರೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದ್ದು, ಮಾಯಕೊಂಡ ಗುಡ್ಡದಲ್ಲಿರುವ ಹೊಸಕೆರೆ ವಾಣಿ ವಿಲಾಸ ಸಾಗರದಂತೆ ಇದ್ದು, ಈ ಕೆರೆಯನ್ನು ವಾಣಿ ವಿಲಾಸ ಸಾಗರ ಮಾದರಿಯಲ್ಲಿ ಹೊಸಕೆರೆ ಅಭಿವೃದ್ಧಿ ಮಾಡಲಾಗುವುದು. ಇದರಿಂದ ಸುತ್ತಮುತ್ತಲ ೩೦ ಹಳ್ಳಿಗಳ ನೀರಿನ ಬವಣೆ ನೀಗಿಸಬಹುದು ಎಂದರು.

ಸಮುದಾಯ ಆರೋಗ್ಯ ಕೇಂದ್ರ, ಬಸ್ ನಿಲ್ದಾಣ:

ವಿಧಾನಸಭಾ ಕ್ಷೇತ್ರದ ಕೇಂದ್ರ ಬಿಂದು ಮಾಯಕೊಂಡ ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಈ ಭಾಗದ ಜನರ ಹೆಚ್ಚಿನ ಬೇಡಿಕೆ ಇದೆ. ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿ ಈ ಬಾರಿಯ ಬಜೆಟ್‌ನಲ್ಲಿ ಸೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರ ಸ್ಥಾಪಿಸಲಾಗುವುದು. ಇದರಿಂದ ಈ ಭಾಗದ ಬಡವರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಅದೇ ರೀತಿ ಸುಸಜ್ಜಿತ ಬಸ್ ನಿಲ್ದಾಣ ಇಲ್ಲದೇ ನೂರಾರು ಬಸ್‌ಗಳು ರಸ್ತೆಯ ಮಧ್ಯೆ ನಿಲುಗಡೆ ಮಾಡಿ ಹೋಗುತ್ತಿವೆ. ಹೀಗಾಗಿ ೧೦ ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುವುದು. ಎರಡು ದಿನದಲ್ಲಿ ರೈಲ್ವೆ ನಿಲ್ದಾಣ ಸಿಸಿರಸ್ತೆಗೆ ಭೂಮಿಪೂಜೆ ನೆರವೇರಿಸಲಿದ್ದು, ಒಟ್ಟಾರೆ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ
ನೀಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹೆಬ್ಬಾಳು ಮಠದ ಶ್ರೀಮಹಾರುದ್ರ ಮಹಾಸ್ವಾಮೀಜಿ, ಹೊಸದುರ್ಗ ಶಾಖಾಮಠದ ಶ್ರೀಈಶ್ವರಾನಂದಪುರಿ ಸ್ವಾಮೀಜಿ, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ, ಹೊಳಲ್ಕೆರೆ ಶ್ರೀತಿಪ್ಪೇರುದ್ರ ಸ್ವಾಮೀಜಿ, ಹಾವೇರಿ ಶ್ರೀನಿಜಶರಣ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮೀಜಿ, ಹೊಸದುರ್ಗ ಶ್ರೀಪುರುಷೋತ್ತನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಸಚಿವ ಎಸ್. ಎ. ರವೀಂದ್ರನಾಥ್, ಮಾಜಿ ಶಾಸಕ ಬಸವರಾಜನಾಯ್ಕ್, ಮಾಯಕೊಂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಗ್ರಾಮದ ಮುಖಂಡರಾದ ಬಿ.ಟಿ.ಹನುಮಂತಪ್ಪ, ಗೋಪಾಲ, ಜಗಣ್ಣ, ಮಂಜಣ್ಣ, ರುದ್ರೇಶ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Next Post
ಜೆಎಫ್-17 ನಮ್ಮ ಎಸ್-400 ಗೆ ಹಾನಿ ಮಾಡಿಲ್ಲ: ಪಾಕ್ ಸುಳ್ಳಿಗೆ ಭಾರತ ಖಡಕ್ ಉತ್ತರ!

ಜೆಎಫ್-17 ನಮ್ಮ ಎಸ್-400 ಗೆ ಹಾನಿ ಮಾಡಿಲ್ಲ: ಪಾಕ್ ಸುಳ್ಳಿಗೆ ಭಾರತ ಖಡಕ್ ಉತ್ತರ!

Leave a Reply Cancel reply

Your email address will not be published. Required fields are marked *

Recent Posts

  • ನೀರ್ಥಡಿ ಐತಿಹಾಸಿಕ ದೇಗುಲ ಶ್ರೀರಂಗನಾಥ ಸ್ವಾಮಿ ದೇವಸ್ಥಾನದ ಅವ್ಯವಸ್ಥೆಗೆ ಕಾಂಗ್ರೆಸ್ ಶಾಸಕ ಬೇಸರ!
  • ಮೂಗಿಗೆ ತುಪ್ಪ ಸವರದೇ ಜನತೆಗೆ ಕೊಟ್ಟ ಭರವಸೆಯಂತೆ ಆಡಳಿತ ನಡೆಯುತ್ತಿದೆ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ
  • ತಾಳ್ಮೆ, ಬುದ್ಧಿಶಕ್ತಿ ಬೆಳವಣಿಗೆಗೆ ಸಹಕಾರಿ ಚದುರಂಗ: ಗಡಿಗುಡಾಳ್ ಮಂಜುನಾಥ್
  • ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ
  • ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In