ಇಟಾನಗರ: ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿ ಜಿಲ್ಲೆಯಲ್ಲಿ ಮಂಗಳವಾರ ಟ್ರಕ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ ಮೂವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಮೂವರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಇಟಾನಗರದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತದ ಹೆಚ್ಚಿನ ವಿವರಗಳು ಇನ್ನೂ ದೊರೆತಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
ಸೇನೆಯ ಈಸ್ಟರ್ನ್ ಕಮಾಂಡ್ ತನ್ನ ಸಿಬ್ಬಂದಿಯ ಸಾವಿಗೆ ಸಂತಾಪ ಸೂಚಿಸಿದ್ದು, ಹವಾಲ್ದಾರ್ ನಖತ್ ಸಿಂಗ್, ನಾಯಕ್ ಮುಖೇಶ್ ಕುಮಾರ್ ಮತ್ತು ಗ್ರೆನೇಡಿಯರ್ ಆಶಿಶ್ ಮೃತ ಯೋಧರು ಎಂದು ಗುರುತಿಸಲಾಗಿದೆ.