Home ದಾವಣಗೆರೆ “ಪುರುಷ ಪ್ರಾಧಾನ್ಯತೆ ತೊಲಗಲಿ, ಭಾರತದ ಮಹಿಳಾ ಶಕ್ತಿ ಬಂಧಿಯಾಗಿದೆ”: ರಾಹುಲ್ ಗಾಂಧಿ!
ದಾವಣಗೆರೆನವದೆಹಲಿಬೆಂಗಳೂರು

“ಪುರುಷ ಪ್ರಾಧಾನ್ಯತೆ ತೊಲಗಲಿ, ಭಾರತದ ಮಹಿಳಾ ಶಕ್ತಿ ಬಂಧಿಯಾಗಿದೆ”: ರಾಹುಲ್ ಗಾಂಧಿ!

Share
ರಾಹುಲ್ ಗಾಂಧಿ
Share

ನವದೆಹಲಿ: ಭಾರತದಲ್ಲಿ ಮಹಿಳೆಯರಿಗೆ ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ಸ್ವಾತಂತ್ರ್ಯ ಸಿಗದಿದ್ದರೆ, ದೇಶವು ಪೂರ್ಣಪ್ರಮಾಣದಲ್ಲಿ ಬೆಳೆಯಲು ಅಥವಾ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಗುರುವಾರ ನಡೆದ ತಮ್ಮ ಇನ್‌ಸ್ಟಾಗ್ರಾಮ್‌ ‘ಆಸ್ಕ್ ಮಿ ಎನಿಥಿಂಗ್’ (Ask Me Anything) ಸಂವಾದದ ಮುಂದುವರಿದ ಭಾಗವಾಗಿ ಶುಕ್ರವಾರ ವಿಡಿಯೋ ಒಂದನ್ನು ಹಂಚಿಕೊಂಡಿರುವ ಅವರು, ಭಾರತದಲ್ಲಿ ಮಹಿಳಾ ಶಕ್ತಿಯನ್ನು ಕಟ್ಟಿಹಾಕಲಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಹೇಳಿದ್ದೇನು?

“ಭಾರತದ ಮಹಿಳೆಯರ ಶಕ್ತಿಯನ್ನು ಬಂಧಿಸಿಡಲಾಗಿದೆ, ಅವರಿಗೆ ತಮ್ಮ ಆಲೋಚನೆಗಳನ್ನು ವ್ಯಕ್ತಪಡಿಸಲು ಮತ್ತು ಕಲ್ಪನೆಗಳನ್ನು ಮಾಡಿಕೊಳ್ಳಲು ಅವಕಾಶ ನೀಡುತ್ತಿಲ್ಲ. ಮಹಿಳೆಯರು ಸ್ವತಂತ್ರವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸದ ಹೊರತು ಯಾವುದೇ ದೇಶ ಯಶಸ್ವಿಯಾಗಲು ಸಾಧ್ಯವಿಲ್ಲ. ನಮ್ಮ ದೇಶದ ಮಹಿಳೆಯರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಸಿಗದಿದ್ದರೆ ಭಾರತವು ಅಪೂರ್ಣವಾಗಿಯೇ ಉಳಿಯುತ್ತದೆ ಎಂಬುದನ್ನು ಜನರಿಗೆ ತಲುಪಿಸುವುದೇ ನನ್ನ ರಾಜಕೀಯದ ಮುಖ್ಯ ಉದ್ದೇಶವಾಗಿದೆ” ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.

ಪುರುಷ ಪ್ರಾಧಾನ್ಯತೆಯ ನಿಯಂತ್ರಣದಿಂದ ಮುಕ್ತಿ ಅಗತ್ಯ:

ಮಹಿಳಾ ಸಬಲೀಕರಣ ಎಂದರೆ ಕೇವಲ ರಾಜಕೀಯ ಅಥವಾ ಉದ್ಯಮ ಕ್ಷೇತ್ರದಲ್ಲಿ ಮಾತ್ರ ಸಾಧನೆ ಮಾಡುವುದಲ್ಲ. ಮನೆಗಳಲ್ಲಿ ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವುದು, ಸಾರ್ವಜನಿಕ ಸ್ಥಳಗಳಲ್ಲಿ ಭಯವಿಲ್ಲದೆ ಓಡಾಡುವುದು ಮತ್ತು ಕುಟುಂಬದ ಸದಸ್ಯರ ಸಿದ್ಧಾಂತಗಳನ್ನು ಪ್ರಶ್ನಿಸುವ ಹಕ್ಕು ಅವರಿಗೆ ಸಿಗಬೇಕು.

“ನಮ್ಮ ಸಮಾಜದಲ್ಲಿ ಪುರುಷರು ಮಹಿಳೆಯರ ಮೇಲೆ ಹೇರುತ್ತಿರುವ ಕಟ್ಟುನಿಟ್ಟಿನ ನಿಯಂತ್ರಣ ಮತ್ತು ಪುರುಷ ಪ್ರಾಧಾನ್ಯತೆಯಿಂದ ಮಹಿಳೆಯರಿಗೆ ಮುಕ್ತಿ ಸಿಗಬೇಕಿದೆ. ದೇಶ ನಿಜವಾದ ಅಭಿವೃದ್ಧಿ ಕಾಣಬೇಕಾದರೆ ಇದು ಅತ್ಯಗತ್ಯ. ಮಹಿಳೆಯರನ್ನು ಮತ್ತೆ ಪ್ರಮುಖ ಚರ್ಚೆಗಳಿಗೆ ಕರೆತಂದು, ಅವರ ಆಶಯದಂತೆ ಬದುಕಲು ಅವಕಾಶ ಮಾಡಿಕೊಡಬೇಕು” ಎಂದು ಅವರು ಪ್ರತಿಪಾದಿಸಿದ್ದಾರೆ.

ಶಿಕ್ಷಣ ಮತ್ತು ಸಮಾನ ಅವಕಾಶ:

ಶಿಕ್ಷಣದ ಹಕ್ಕಿಗಾಗಿ ಹೋರಾಡುತ್ತಿರುವ ಯುವತಿಯರ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ್ದ ರಾಹುಲ್ ಗಾಂಧಿ, “ಭಾರತದ ಮಹಿಳೆಯರೇ ನಮ್ಮ ಶಕ್ತಿ ಮತ್ತು ದೊಡ್ಡ ಆಸ್ತಿ. ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಸಮಾನ ಸ್ಥಾನಮಾನ ಪಡೆಯಲು ಅರ್ಹರಿದ್ದಾರೆ. ವಾಸ್ತವವಾಗಿ ಅವರಿಗೆ ಸಮಾನ ಸ್ಥಾನಕ್ಕಿಂತಲೂ ಹೆಚ್ಚಿನ ಆದ್ಯತೆ ಸಿಗಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles