Site icon Kannada News-suddikshana

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ಪ್ರತ್ಯೇಕ ಪ್ರದೇಶಕ್ಕೆ ವಿಮಾನ ಸ್ಥಳಾಂತರ

ನವದೆಹಲಿ: ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ತನಿಖೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

6ಇ2211 ವಿಮಾನವು ದೆಹಲಿಯಿಂದ ವಾರಣಾಸಿಗೆ ಇಂದು ಮುಂಜಾನೆ ಹೊರಟಿತ್ತು. ಈ ವೇಳೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಬಂದಿದೆ. ವಿಮಾನವು ಕಿಖಖಿ ಸ್ಥಳ ತಲುಪುತ್ತಿದ್ದಂತೆ ಎಲ್ಲಾ ಪ್ರಯಾಣಿಕರನ್ನು ತುರ್ತು ಬಾಗಿಲಿನ ಮೂಲಕ ಸ್ಥಳಾಂತರ ಮಾಡಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ವಿಮಾನವನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಬ್ ಬೆದರಿಕೆ ಬಂದ ತಕ್ಷಣವೇ ಕ್ಷಿಪ್ರ ಪ್ರತಿಕ್ರಿಯೆ ತಂಡವನ್ನು ನಿಯೋಜನೆ ಮಾಡಲಾಗಿದ್ದು, ತಪಾಸಣೆ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇನ್ನು ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಸಂಖ್ಯೆ ನಿಖರವಾಗಿ ತಿಳಿದುಬಂದಿಲ್ಲ.

Exit mobile version