ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ

On: April 29, 2025 5:36 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-29-04-2025

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಒಂದನೇ ವಿಕ್ರಮಾದಿತ್ಯನ ಕಾಲದ ಶಿಲಾಶಾಸನ ಪತ್ತೆಯಾಗಿದೆ ಎಂದು ಕಮಲಾಪುರದಲ್ಲಿನ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕ ಡಾ. ಆರ್. ಶೇಜೇಶ್ವರ ತಿಳಿಸಿದ್ದಾರೆ.

ಮಾದಾಪುರ ಕೆರೆಯಲ್ಲಿ ಸ್ಥಳೀಯರು ಜೆಸಿಬಿಯಿಂದ ಮಣ್ಣನ್ನು ತೆಗೆಯುವಾಗ ಶಿಲಾ ಶಾಸನ ಪತ್ತೆಯಾಗಿದೆ. ಇಲ್ಲಿಗೆ ಪುರಾತತ್ವ ಇಲಾಖೆ ನಿರ್ದೇಶಕರು ಭೇಟಿ ನೀಡಿ ಪರಿಶೀಲಿಸಿದ ನಂತರ ಇದು ಬಾದಾಮಿ ಚಾಲುಕ್ಯರ ಶಿಲಾಶಾಸನವಾಗಿದೆ ಎಂದು ತಿಳಿದುಬಂದಿದೆ.

ಶಾಸನವು 5 ಅಡಿ ಉದ್ದವಿದ್ದು ಹಳೆಗನ್ನಡದ 17 ಸಾಲು ಶಾಸನವನ್ನು ಒಳಗೊಂಡಿದೆ. ಇದು ಕ್ರಿ.ಶ 7 ನೇ ಶತಮಾನದ ಬಾದಾಮಿ ಚಲುಕ್ಯರ ಒಂದನೇ ವಿಕ್ರಮಾದಿತ್ಯನ ಕ್ರಿ.ಶ.654-681 ಕಾಲದ ಶಾಸನವಾಗಿದೆ. ಒಂದನೇ ವಿಕ್ರಮಾದಿತ್ಯನು ರಾಜ್ಯವಾಳುವಾಗ ಅವನ ಅಧಿಕಾರಿ ಸಿಂಘವೆಣ್ಣನು ಬಳ್ಳಾವಿ ನಾಡನ್ನು ಆಳುತ್ತಿದ್ದಾಗ ಪೂರ್ವ ಮರ್ಯಾದೆಯಿಂದ ಪ್ರಜೆಗಳಿಗಾಗಿ ಊರ ಮೇಲಿನ ಕೆಲವು ತೆರಿಗೆಗಳನ್ನು ಮನ್ನಾ ಮಾಡಿರುವುದನ್ನು ಹಾಗೂ ಕೆರೆಯನ್ನು ನಿರ್ಮಿಸಿದ ಓಜರಿಗೆ ಆರು ಮತ್ತರು ಭೂಮಿಯನ್ನು ದಾನ ನೀಡಿರುವುದನ್ನು ಹಾಗೂ ಈ ಭೂಮಿಯು ಬಳ್ಳಾವಿ ಎಪ್ಪತ್ತರ ಒಕ್ಕಲುಗಳಿಗೆ ಸಲ್ಲುತ್ತೆಂದು ಉಲ್ಲೇಖಿಸಲಾಗಿದೆ.

ಈ ಶಾಸನ ಶೋಧನೆಯಿಂದ ಬಳ್ಳಾವಿ ಎಪ್ಪತ್ತು ಎಂಬ 70 ಗ್ರಾಮಗಳಿದ್ದ ಆಡಳಿತ ವಿಭಾಗದ ಪ್ರಾಚೀನತೆಯನ್ನು ಹಾಗೂ ಶಾಸನವು 1344 ವರ್ಷಗಳ ಪುರಾತನವಾದದು ಎಂದು ತಿಳಿಸುತ್ತದೆ. ಈ ಶಾಸನದ ಮುಂಭಾಗ ಹಾಗೂ ಹಿಂಭಾಗದಲ್ಲಿ ಕ್ರಿ.ಶ.17 ನೇ ಶತಮಾನದಲ್ಲಿ ಅಪೂರ್ಣ ಉಬ್ಬು ಶಿಲ್ಪವಿದೆ.

ಈ ಶಾಸನ ಓದಿಕೊಟ್ಟ ಪ್ರೊ.ಶ್ರೀನಿವಾಸ ಪಾಡಿಗರ, ರಮೇಶ ಹಿರೇಜಂಬೂರು, ಕ್ಷೇತ್ರ ಕಾರ್ಯದಲ್ಲಿ ಸಹಕರಿಸಿದ ಡಾ;ರವಿಕುಮಾರ ನವಲಗುಂದ, ಮಂಜಪ್ಪ ಚುರ್ಚಿಗುಂಡಿ, ಮಾದಾಪುರ ಗ್ರಾಮ ಆಡಳಿತಾಧಿಕಾರಿ ವಿಶ್ವನಾಥ, ಗ್ರಾಮಸ್ಥರಾದ ಬುಜಂಗ, ವೀರೇಶ್ ಹಾಗೂ ಇತರರ ಕಾರ್ಯವನ್ನು ಪುರಾತ್ವತ ಇಲಾಖೆ ನಿರ್ದೇಶಕರು ಶ್ಲಾಘಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment