SUDDIKSHANA KANNADA NEWS/ DAVANAGERE/DATE:01_09_2025
ದಾವಣಗೆರೆ: ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು, ಕಾರ್ಖಾನೆಗಳು, ಸಂಸ್ಥೆಯ ಮಾಲೀಕರು ತಮ್ಮ ಸಂಸ್ಥೆಯಲ್ಲಿ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ) ಕಾಯ್ದೆಯ ಸರ್ವೋಚ್ಛ ನ್ಯಾಯಾಲಯ ನೀಡಿರುವ ನಿರ್ದೇಶನಗಳಂತೆ 10 ಮತ್ತು 10 ಕ್ಕಿಂತ ಹೆಚ್ಚಿನ ಕಾರ್ಮಿಕರನ್ನು ಹೊಂದಿರುವ ಪ್ರತಿ ಸಂಸ್ಥೆಯ ಮಾಲೀಕರು ತಮ್ಮ ಸಂಸ್ಥೆಯಲ್ಲಿ ಆಂತರಿಕ ದೂರು ಸಮಿತಿ ಯನ್ನು ರಚಿಸಬೇಕು.
READ ALSO THIS STORY: ಮಸೀದಿ ಪಕ್ಕದಲ್ಲೇ ಗಣಪತಿ ಇಟ್ಟು ಕೇಕೆ ಹೊಡೆಯಬೇಕಾ, ತಣ್ಣಗಿರದಿದ್ರೆ ಒಳಗೆ ಹಾಕಿಸ್ತೇನೆ: ಎಸ್. ಎಸ್. ಮಲ್ಲಿಕಾರ್ಜುನ್ ಗರಂ!
ಜಿಲ್ಲೆಯಲ್ಲಿ ಹಲವು ಸಂಸ್ಥೆಗಳು ಇದುವರೆಗೂ ಆಂತರಿಕ ದೂರು ಸಮಿತಿಯನ್ನು ರಚಿಸದೇ ಮತ್ತು ರಚಿಸಿರುವ ಬಗ್ಗೆ ಮಾಹಿತಿ ನೀಡದಿರುವುದು ಕಂಡುಬಂದಿದೆ. ಸರ್ವೋಚ್ಛ ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ಆಂತರಿಕ ಸಮಿತಿಯನ್ನು ರಚಿಸದ ಎಲ್ಲಾ ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು, ಕಾರ್ಖಾನೆಗಳು, ಈ ಕೂಡಲೇ ಆಂತರಿಕ ದೂರು ಸಮಿತಿಯನ್ನು ರಚನೆ ಮಾಡಿ, ಸಮಿತಿ ರಚಿಸಿದ ಆದೇಶದ ಪ್ರತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಕೂಡಲೇ ಸಲ್ಲಿಸಬೇಕು.
ಜೊತೆಗೆ ಕಾರ್ಮಿಕ ಅಧಿಕಾರಿಗಳ ಕಛೇರಿ ದಾವಣಗೆರೆ ಉಪ ವಿಭಾಗ, ದಾವಣಗೆರೆ, ಬಿ.ಎಸ್.ಎನ್.ಎಲ್. ಆಫೀಸ್ 2ನೇ ಮಹಡಿ, ಶ್ರೀ ಡಿ. ದೇವರಾಜ ಅರಸು ಬಡಾವಣೆ, ಪಿ.ಬಿ. ರೋಡ್ ದಾವಣಗೆರೆ-577006. ಕಚೇರಿಗೆ ಸಲ್ಲಿಸಬೇಕೆಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.