ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸ್ವಸಹಾಯ ಸಂಘದ ಮಹಿಳೆಯರ ಉತ್ಪನ್ನಗಳಿಗೆ ಅಂತರರಾಷ್ಟ್ರೀಯ ಮಾರುಕಟ್ಟೆ: ಡಾ. ಪ್ರಭಾ ಮಲ್ಲಿಕಾರ್ಜುನ್

On: May 16, 2025 6:57 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-16-05-2025

ದಾವಣಗೆರೆ: ಜಿಲ್ಲೆಯಲ್ಲಿ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ರಾಜ್ಯ,ದೇಶ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸಲಾಗುವುದು. ಆದ್ದರಿಂದ ಉತ್ಪನ್ನಗಳನ್ನು ಗುಣಮಟ್ಟದಲ್ಲಿ ಹಾಗೂ ಉತ್ತಮ ರೀತಿಯಲ್ಲಿ ತಯಾರಿಸುವ ಜೊತೆಗೆ ಪ್ಯಾಕಿಂಗ್ ಮಾಡುವುದು ಮುಖ್ಯ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸಲಹೆ ನೀಡಿದರು.

ನಗರದ ಗ್ಲಾಸ್ ಹೌಸ್ ನಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಕೃಷಿ ಇಲಾಖೆ,ಕೌಶಲ್ಯ ಅಭಿವೃದ್ಧಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪಿಎಂಎಫ್ ಎಂಇ ಫಲಾನುಭವಿಗಳಿಗೆ ಸಮಾಲೋಚನಾ ಸಮಾರಂಭ ಮತ್ತು ಮಾರುಕಟ್ಟೆ ನೆರವು ಹಾಗೂ ವ್ಯಾಪಾರ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಗ್ರಾಮೀಣ ಪ್ರದೇಶದಲ್ಲಿ ಮಹಿಳಾ ಸದಸ್ಯರನ್ನು ಒಗ್ಗೂಡಿಸಿ ಸ್ವಸಹಾಯ ಗುಂಪುಗಳನ್ನು ರಚಿಸಲಾಗಿದೆ. ಈ ರೀತಿ ರಚಿಸಲಾಗಿರುವ ಸ್ವ ಸಹಾಯ ಗುಂಪುಗಳ ಮಹಿಳೆಯರು ಜೀವನೋಪಾಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಹಲವಾರು ಕೌಶಲ್ಯ ತರಬೇತಿಗಳನ್ನು ನೀಡಲಾಗುತ್ತಿದೆ ಎಂದರು.

ಆರ್ಥಿಕವಾಗಿ ಕಡಿಮೆ ಬಡ್ಡಿ ದರದಲ್ಲಿ ಸಮುದಾಯ ಬಂಡವಾಳ ನಿಧಿ, ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಒದಗಿಸಿಕೊಡಲಾಗುತ್ತಿದೆ. ಈ ರೀತಿ ತರಬೇತಿ ಪಡೆದು ಜೀವನೋಪಾಯ ಚಟುವಟಿಕೆಗಳಲ್ಲಿ ತೊಡಗಿರುವ ಮಹಿಳಾ ಸದಸ್ಯರಿಗೆ ಹಾಗೂ ಗುಂಪುಗಳಿಗೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವ್ಯಾಪಾರ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳನ್ನು ಮಾಡಿಕೊಡಲಾಗುತ್ತಿದೆ ಎಂದರು.

ಕೃಷಿ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಕಿರು ಆಹಾರ ಉದ್ದಿಮೆಗಳ ಸಂಸ್ಕರಣೆ ನಿಯಮಬದ್ಧತೆ ಯೋಜನೆಯಡಿ ಸಂಜೀವಿನಿ ಸ್ವ ಸಹಾಯ ಗುಂಪುಗಳಲ್ಲಿರುವ ಕಿರು ಮಹಿಳಾ ಉದ್ಯಮದಾರರಿಗೆ ಮಾರುಕಟ್ಟೆ ನೆರವು ಮತ್ತು ವ್ಯಾಪಾರವನ್ನು ಉತ್ತೇಜಿಸುವ ಸಲುವಾಗಿ ಸಿರಿಧಾನ್ಯ ಉತ್ಪನ್ನಗಳು, ಉಪ್ಪಿನಕಾಯಿ, ಸಿಹಿ ಪದಾರ್ಥಗಳು, ಬೆಲ್ಲದ ಉತ್ಪನ್ನಗಳು, ಶೆಂಗಾ ಚಿಕ್ಕಿ ಇತ್ಯಾದಿ ಆಹಾರ ಪದಾರ್ಥಗಳನ್ನು ತಯಾರಿಸುವ 62 ಮಹಿಳಾ ಸ್ವ ಸಹಾಯ ಸಂಘದ ಕಿರು ಉದ್ಯಮದಾರರಿಗೆ ಒಟ್ಟು ರೂ. 60 ಲಕ್ಷಗಳನ್ನು ಕೃಷಿ ಇಲಾಖೆಯಿಂದ ಸ್ವ- ಸಹಾಯ ಸಂಘಗಳಿಗೆ ಬ್ರಾಂಡಿಂಗ್ ಮತ್ತು ಲೇಬಲಿಂಗ್ ಮಾಡಿಕೊಡಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿ.ಪಂ ಸಿಇಒ ಸುರೇಶ್ ಬಿ ಇಟ್ನಾಳ್,ಸಂಪನ್ಮೂಲ ವ್ಯಕ್ತಿ ಶಿಜಿತ್,ರೇಷ್ಮಾ ಕೌಸರ್,ಶ್ರೀನಿವಾಸ್, ರಾಘವೇಂದ್ರ, ಷಣ್ಮುಖಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment