ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಇಂದು 10ನೇ ಅಂತಾರಾಷ್ಟ್ರೀಯ ಯೋಗ ದಿನ: ಜಗತ್ತಿನಾದ್ಯಂತ ಆಚರಣೆ

On: June 21, 2024 9:24 AM
Follow Us:
---Advertisement---

ನವದೆಹಲಿ: ಇಂದು ಅಂತಾರಾಷ್ಟ್ರೀಯ ಯೋಗ ದಿನ. ಭಾರತ ಸೇರಿ ಜಗತ್ತಿನಾದ್ಯಂತ ಯೋಗ ದಿನ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್ ಸೆಂಟರ್ ನಲ್ಲಿ ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸತತ ಮೂರನೇ ಬಾರಿಗೆ ಕೇಂದ್ರ ಸಚಿವರಾದ ನಂತರ ಜಮ್ಮು ರಾಜಧಾನಿ ಶ್ರೀನಗರಕ್ಕೆ ಆಗಮಿಸಿದ ಬಿಜೆಪಿ ಮುಖಂಡ ಜಿತೇಂದ್ರ ಸಿಂಗ್, ಜೂನ್ 21ರಂದು ಶ್ರೀನಗರದಲ್ಲಿ ನಡೆಯಲಿರುವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭಾಗವಹಿಸಲಿದ್ದಾರೆ. ಇವರ ಜತೆ ಸುಮಾರು 9,000 ಮಂದಿ ಯೋಗ ಪ್ರದರ್ಶನ ನೀಡಲಿದ್ದಾರೆ ಮೂಲಗಳು ತಿಳಿಸಿವೆ. ಭಾರತ ಸೇರಿದಂತೆ ಜಗತ್ತಿನಾದ್ಯಂತ 175ಕ್ಕೂ ಅಧಿಕ ರಾಷ್ಟ್ರಗಳು ಯೋಗ ದಿನವನ್ನು ಆಚರಿಸುತ್ತವೆ.

ನರೇಂದ್ರ ಮೋದಿ ಅವರ ಪ್ರಯತ್ನದ ಫಲವಾಗಿ ಜಗತ್ತಿನಾದ್ಯಂತ ಯೋಗ ದಿನ ಆಚರಿಸಲಾಗುತ್ತಿದೆ. ಯೋಗದಲ್ಲಿರುವ ಬಗೆಗಳನ್ನು, ಇದು ಮನುಷ್ಯನ ಮನಸು, ದೇಹವನ್ನು ಆರೋಗ್ಯವನ್ನಾಗಿಸುವ ರೀತಿಯನ್ನು ಮನಮುಟ್ಟುವಂತೆ ಹೇಳುತ್ತಿದೆ. ಹೀಗಾಗಿ ಯೋಗದ ಪ್ರಸಿದ್ಧಿ ದಿನೇದಿನೇ ಪ್ರಖರಿಸುತ್ತಲೇ ಇದೆ. ಹೆಚ್ಚೆಚ್ಚು ರಾಷ್ಟ್ರಗಳು ಒಪ್ಪಿಕೊಳ್ಳುತ್ತಿವೆ. ಕೊವಿಡ್ 19 ಕಾಲದಲ್ಲೂ ಕೂಡ ಜಗತ್ತಿನಾದ್ಯಂತ ಯೋಗ ಅನೇಕರ ಕೈ ಹಿಡಿದಿದೆ.

Join WhatsApp

Join Now

Join Telegram

Join Now

Leave a Comment