Site icon Kannada News-suddikshana

ತಿಂಗಳಿಗೆ 50 ಸಾವಿರ ರೂ. ವೇತನ: ಫೆ.28 ರಂದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂದರ್ಶನ

SUDDIKSHANA KANNADA NEWS/ DAVANAGERE/ DATE:24-02-2025

ಶಿವಮೊಗ್ಗ: ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಿದ್ದು, ಫೆ.28 ರ ಬೆಳಿಗ್ಗೆ 10 ಗಂಟೆಗೆ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಕಚೇರಿಯಲ್ಲಿ ಸಂದರ್ಶನ ಏರ್ಪಡಿಸಲಾಗಿದೆ.

ಪಶುವೈದ್ಯಕೀಯ ಔಷಧ ಹಾಗೂ ವಿಷಯ ಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ(ಕುಕ್ಕುಟಶಾಸ್ತ್ರ/ಪ್ರಾಣಿ ಆಹಾರ ಶಾಸ್ತ್ರ/ ಜಾನುವಾರು ನಿರ್ವಹಣೆ), ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ ಹಾಗೂ ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಎನ್‌ಇಟಿ) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.56,700 ಹಾಗೂ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000 ವೇತನವನ್ನು ಪಾವತಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-200872 ಹಾಗೂ ವಿಶ್ವವಿದ್ಯಾಲಯಯ ಜಾಲತಾಣ www.kvafsu.edu.in ಗೆ ಸಂಪರ್ಕಿಸಬಹುದು ಎಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ತಿಳಿಸಿದ್ದಾರೆ.

Exit mobile version