Site icon Kannada News-suddikshana

ಅರಿವು ಯೋಜನೆಯಡಿ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ

SUDDIKSHANA KANNADA NEWS/ DAVANAGERE/ DATE-27-04-2025

ಶಿವಮೊಗ್ಗ: 2025-26 ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಸಮುದಾಯ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(ಕೆಇಎ) ಆಯ್ಕೆಯಾಗುವ ಫ್ರೆಶ್/ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅರಿವು ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವೃತ್ತಿಪರ ಕೋರ್ಸ್ಗಳಾದ ಎಂಬಿಬಿಎಸ್, ಬಿಡಿಎಸ್, ಬ್ಯಾಚುಲರ್ ಆಫ್ ಆಯುಷ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬ್ಯಾಚುಲರ್ ಆಫ್ ಇಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ, ಫಾರ್ಮಸಿ, ಅಗ್ರಿಕಲ್ಚರ್ ಸೈನ್ಸ್, ವೆಟರ್ನರಿ ಹಾಗೂ ಫಾರ್ಮ್ ಸೈನ್ಸ್ ಕೋರ್ಸ್ ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಈ ಸೌಲಭ್ಯವನ್ನು ಒದಗಿಸಲಾಗುತ್ತದೆ.

ಮೇ.5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, www.kmdconline.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಎಸ್‌ಎಸ್‌ಎಲ್‌ಸಿ ಮಾರ್ಕ್ಸ್ ಕಾರ್ಡ್/ಪಿಯುಸಿ ಮಾರ್ಕ್ಸ್ ಕಾರ್ಡ್, ಆಧಾರ್ ಕಾರ್ಡ್, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ(8 ಲಕ್ಷ ಒಳಗಿದ್ದವರಿಗೆ), ವಿದ್ಯಾರ್ಥಿ/ ಪೋಷಕರ ಫೋಟೋ, ಸಿಇಟಿ/ನೀಟ್ ಹಾಲ್ ಟಿಕೆಟ್, ಇಂಡೆಮ್ನಿಟಿ ಬಾಂಡ್/ನೋಟರಿ, ವಿದ್ಯಾರ್ಥಿ ಮತ್ತು ಪೋಷಕರ ಸೆಲ್ಫ್ ಡಿಕ್ಲರೇಷನ್ ಲೆಟರ್ ಈ ಎಲ್ಲಾ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಅಚ್ಚುತರಾವ್ ಲೇ ಔಟ್, 4ನೇ ತಿರುವು, ನಂಜಪ್ಪ ಆಸ್ಪತ್ರೆ ಮುಂಭಾಗ ಶಿವಮೊಗ್ಗ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182228262 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪರು ತಿಳಿಸಿದ್ದಾರೆ.

Exit mobile version