Site icon Kannada News-suddikshana

ಜಿಮ್ ತೆರೆಯಲು ಸಹಾಯಧನಕ್ಕೆ ಆಹ್ವಾನ

SUDDIKSHANA KANNADA NEWS/ DAVANAGERE/ DATE:19-08-2023

ದಾವಣಗೆರೆ: 2023-24ನೇ ಸಾಲಿನ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾಗಿರಬೇಕು. ಅರ್ಜಿ ನಮೂನೆಗಳನ್ನು ಜಿಲ್ಲಾ ಕ್ರೀಡಾಂಗಣದಲ್ಲಿರುವ ಸಹಾಯಕ ನಿರ್ದೇಶಕರ ಕಾರ್ಯಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಪಡೆದು ಸೆ.5ರ ಒಳಗಾಗಿ ಅದೇ ಕಛೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 081922374480 ಗೆ ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version