SUDDIKSHANA KANNADA NEWS/ DAVANAGERE/ DATE:05-09-2024
ದಾವಣಗೆರೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿಗೆ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆ ಹಾನಿಯಾದ ರೈತರ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್ ಕಚೇರಿ ಹಾಗೂ ಗ್ರಾಮ ಪಂಚಾಯಿತಿ, ರೈತಸಂಪರ್ಕ ಕೇಂದ್ರಗಳಲ್ಲಿ ಸೆ.5 ರಂದು ಪ್ರಕಟಿಸಲಾಗಿದೆ.
ಈ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ್ ಕಚೇರಿ, ಕೃಷಿ, ತೋಟಗಾರಿಕೆ ಇಲಾಖೆಗಳಲ್ಲಿ 7 ದಿನದೊಳಗಾಗಿ ಅರ್ಜಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಗಂಗಾಧರಸ್ವಾಮಿ.ಜಿ.ಎಂ ಇವರು ತಿಳಿಸಿದ್ದಾರೆ.
ಆಕ್ಷೇಪಣೆ ಸಲ್ಲಿಸಲು ಅರ್ಜಿ:
ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, 15 ನೇ ಹಣಕಾಸು ಆಯೋಗ ಮತ್ತು ಪಿಎಂ-ಅಭಿಯಾನ ಕಾರ್ಯಕ್ರಮದಡಿ ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಬಹುದು.
ಜಿಲ್ಲೆಯಲ್ಲಿ 2024-25 ಆರ್ಥಿಕ ವರ್ಷದಲ್ಲಿ ಅನುಮೋದನೆಯಾಗಿ ಖಾಲಿ ಇರುವ ಕಿ.ಆ.ಸಹಾಯಕರ ಹುದ್ದೆಗೆ ಆಗಸ್ಟ್ 17 ರಂದು ಕಚೇರಿಗೆ ಸ್ವೀಕೃತಿಯಾದ ಅರ್ಜಿಗಳಲ್ಲಿ, ರೋಸ್ಟರ್ ಹಾಗೂ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳ ಕಚೇರಿ, ಎಸ್.ಎಸ್. ಹೈಟೆಲ್ ಆಸ್ಪತ್ರೆ ಹತ್ತಿದ, ಎನ್.ಸಿ.ಸಿ ಕ್ಯಾಂಪ್ ಪಟ್ಟಿ, ಶ್ರೀರಾಮ ನಗರ ರಸ್ತೆ, ದಾವಣಗೆರೆ-577005, ಇಲ್ಲಿನ ಸೂಚನಾ ಫಲಕದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಸೆ.6 ರಂದು ಪ್ರಕಟಿಸಲಾಗಿದ್ದು, ಈ ಪಟ್ಟಿಗೆ ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಲಿಖಿತವಾಗಿ ಸಮರ್ಥನೀಯ ಪುರಾವೆಗಳೊಂದಿಗೆ ಸೆ.20 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ರೇಣುಕಾರಾಧ್ಯ ತಿಳಿಸಿದ್ದಾರೆ.