Site icon Kannada News-suddikshana

ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್, ಪೌರ ಕಾರ್ಮಿಕರಿಗೆ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಅರ್ಜಿ

SUDDIKSHANA KANNADA NEWS/ DAVANAGERE/DATE:20_08_2025

ದಾವಣಗೆರೆ: ಜಗಳೂರು ಪಟ್ಟಣ ವ್ಯಾಪ್ತಿಯ ನಿವೇಶನ ರಹಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಗಡದ ಅಲೆಮಾರಿ, ಅರೆ ಅಲೆಮಾರಿ ಸಮುದಾಯ, ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಹಾಗೂ ಪೌರ ಕಾರ್ಮಿಕರಿಗೆ ನಿವೇಶನಕ್ಕಾಗಿ
ಅರ್ಜಿ ಆಹ್ವಾನಿಸಲಾಗಿದೆ.

READ ALSO THIS STORY: ಕಾಂಗ್ರೆಸ್ ಲಿಂಗಾಯತ ಸಚಿವರು, ಶಾಸಕರು, ಸಮಾಜದ ನಾಯಕರು ಸಭೆ ನಡೆಸಿದ್ಯಾಕೆ? ಏನೆಲ್ಲಾ ಚರ್ಚೆ ಮಾಡಿದ್ರು?

ಅರ್ಹರು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಆಗಸ್ಟ್ 25 ರೊಳಗಾಗಿ ಜಗಳೂರು ಪಟ್ಟಣ ಪಂಚಾಯಿತಿಗೆ ಸಲ್ಲಿಸಬೇಕೆಂದು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಸಿ.ಲೋಕ್ಯಾನಾಯ್ಕ ತಿಳಿಸಿದ್ದಾರೆ.

ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ದಾವಣಗೆರೆ: ದಾವಣಗೆರೆಯ ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿಯ ಆಡಳಿತ ಮಂಡಳಿಯ 15 ಸ್ಥಾನಗಳ ಪೈಕಿ 8 ಸ್ಥಾನಗಳ ಆಯ್ಕೆಗೆ ಚುನಾವಣೆಯನ್ನು (ತಾತ್ಕಾಲಿಕ) ಸೆಪ್ಟೆಂಬರ್ 14 ರಂದು ನಡೆಸಲಾಗುವುದು.

ಅಜೀವ ಸದಸ್ಯತ್ವ ಪಟ್ಟಿಯನ್ನು ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ, ಇಂಡಿಯನ್ ರೆಡ್ ಕ್ರಾಸ್ ಭವನ, ದೇವರಾಜ್ ಅರಸ್ ಬಡಾವಣೆ, ದಾವಣಗೆರೆ ಇಲ್ಲಿ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಅಜೀವ ಸದಸ್ಯತ್ವಕ್ಕೆ ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 22 ಕೊನೆ ದಿನವಾಗಿರುತ್ತದೆ. ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಲಿಖಿತವಾಗಿ ಕಚೇರಿಗೆ ಸಲ್ಲಿಸಬೇಕು. ಅಜೀವ ಸದಸ್ಯತ್ವ ಪಡೆದವರಿಗೆ ಮಾತ್ರ ಮತದಾನ ಮಾಡಲು ಹಾಗೂ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಲು ಅವಕಾಶವಿರುತ್ತದೆ. ಆಗಸ್ಟ್ 23 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಣೆ ಮಾಡಲಾಗುವುದು. ಈ ಪಟ್ಟಿ ಪ್ರಕಟಣೆಯ ನಂತರ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.

Exit mobile version