SUDDIKSHANA KANNADA NEWS/ DAVANAGERE/DATE:21_08_2025
ದಾವಣಗೆರೆ: ಪ್ರಸಕ್ತ ಸಾಲಿಗೆ ನ್ಯಾಮತಿ ತಾಲ್ಲೂಕು ಸೂರಗೊಂಡನಕೊಪ್ಪದಲ್ಲಿ ಸಂತಸೇವಾಲಾಲ್ ಪ್ರಾಥಮಿಕ ಪರಿಶಿಷ್ಟ ಜಾತಿಯ ವಸತಿ ಶಾಲೆಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
READ ALSO THIS STORY: ದಾವಣಗೆರೆಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಆರೋಪ: ಗೃಹಿಣಿ ಆತ್ಮಹತ್ಯೆಗೆ ಶರಣು!
ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಹೊನ್ನಾಳಿ ಇಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳನ್ನು ಸೀಟ್‍ಗಳ ಲಭ್ಯತೆಯನುಸಾರ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿ ಪ್ರವೇಶ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹೊನ್ನಾಳಿ ಇವರನ್ನು ಸಂಪರ್ಕಿಸಲು ಜಂಟಿ ನಿರ್ದೇಶಕರಾದ ನಾಗರಾಜ ತಿಳಿಸಿದ್ದಾರೆ.