Site icon Kannada News-suddikshana

ಸ್ನಾತಕೋತ್ತರ ಪದವಿ ತರಗತಿಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಅರ್ಜಿ

SUDDIKSHANA KANNADA NEWS/ DAVANAGERE/DATE:23_08_2025

ದಾವಣಗೆರೆ: ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಮೈಸೂರು ವತಿಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ ಸ್ನಾತಕೋತ್ತರ ಪದವಿ ತರಗತಿಗಳ ಪ್ರವೇಶಾತಿಗಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಸುದ್ದಿಯನ್ನೂ ಓದಿ: ಬೀದಿ ನಾಯಿಗಳಿಗೆ ಜನರು ಆಹಾರ ನೀಡುವಂತಿಲ್ಲ, ಲಸಿಕೆ ನೀಡಿ ಆಶ್ರಯ ತಾಣಗಳಿಗೆ ಬಿಡಿ: ಸುಪ್ರೀಂಕೋರ್ಟ್ ತೀರ್ಪು!

ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:0821-2438931 ನ್ನು ಸಂಪರ್ಕಿಸಲು ಕಾಲೇಜಿನ ಡೀನ್ ತಿಳಿಸಿದ್ದಾರೆ.

ಅಗ್ನಿವೀರ್ ಸ್ಪೋಟರ್ಸ್ ಮ್ಯಾನ್ ನೇಮಕಾತಿ:

ಮದ್ರಾಸ್ ಇಂಜಿನಿಯರ್ ಗ್ರೂಪ್ ಮತ್ತು ಸೆಂಟರ್ ಬೆಂಗಳೂರು, ಇಲ್ಲಿ ಯುಹೆಚ್‍ಕ್ಯೂ ಕೋಟಾದಡಿಯಲ್ಲಿ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಭಿತರಿಗಾಗಿ ಅಕ್ಟೋಬರ್ 6 ರಂದು ಅಗ್ನಿವೀರ್ ಸ್ಪೋಟ್ರ್ಸ್‍ಮ್ಯಾನ್ ನೇಮಕಾತಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಮದ್ರಾಸ್ ಇಂಜಿನಿಯರ್ ಗ್ರೂಪ್ ಮತ್ತು ಸೆಂಟರ್ ಬೆಂಗಳೂರು ಇವರನ್ನು ಸಂಪರ್ಕಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Exit mobile version