SUDDIKSHANA KANNADA NEWS/ DAVANAGERE/ DATE:08-03-2024
ದಾವಣಗೆರೆ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲು ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಸಮಾಜ ಸೇವಕರು, ತಲಾ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇಬ್ಬರು ಮಹಿಳಾ ಪ್ರತಿನಿಧಿಗಳು ಒಬ್ಬರು ಅಲ್ಪಸಂಖ್ಯಾತರ ಪ್ರತಿನಿಧಿಗಳನ್ನು ಗುರುತಿಸಿ ನಾಮನಿರ್ದೇಶನ ಮಾಡಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಪ್ರಸ್ತಾವನೆಯನ್ನು ಮಾ. 19 ಕ್ಕೆ ಸಂಜೆ 5.30 ಗಂಟೆಯೊಳಗೆ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಬಿಎಸ್ಎನ್ಎಲ್ ಕಟ್ಟಡ, ದೇವರಾಜ
ಅರಸ್ ಬಡಾವಣೆ, ಹರಿಹರ ರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಸಹಾಯಕ ಕಾರ್ಮಿಕ ಆಯುಕ್ತರಾದ ಇಬ್ರಾಹಿಂ ತಿಳಿಸಿದ್ದಾರೆ.