ಇರಾನ್: ಇರಾನ್ ರಾಜಧಾನಿ ಟೆಹ್ರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಭೀಕರ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಪುತ್ರಿ ಮತ್ತು ಮೊಮ್ಮಗು ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.
ಈ ದಾಳಿಯಲ್ಲಿ ಖಮೇನಿಯವರ ಸೊಸೆ ಮತ್ತು ಅಳಿಯ ಕೂಡ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇನ್ನೊಂದೆಡೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಖಮೇನಿ ಕೂಡ ಈ ದಾಳಿಯಲ್ಲಿ ಹತರಾಗಿದ್ದಾರೆ ಎಂದು ತಮ್ಮ ‘ಟ್ರೂತ್ ಸೋಶಿಯಲ್’ ಖಾತೆಯಲ್ಲಿ ಘೋಷಿಸಿದ್ದಾರೆ.
ಇಸ್ರೇಲ್ ಪ್ರಧಾನಿ ನೆತನ್ಯಾಹು ಕೂಡ ಖಮೇನಿ ಬದುಕುಳಿದಿರುವ ಸಾಧ್ಯತೆ ಕಡಿಮೆ ಎಂದು ಸುಳಿವು ನೀಡಿದ್ದಾರೆ.
ಆದರೆ, ಇರಾನ್ನ ವಿದೇಶಾಂಗ ಸಚಿವಾಲಯವು ಈ ವರದಿಗಳನ್ನು ‘ಮಾನಸಿಕ ಯುದ್ಧ’ (Mental Warfare) ಎಂದು ಕರೆದಿದ್ದು, ಖಮೇನಿ ಸುರಕ್ಷಿತವಾಗಿದ್ದಾರೆ ಎಂದು ಪ್ರತಿಪಾದಿಸುತ್ತಿದೆ.
ಇರಾನ್ ಸರ್ಕಾರವು ದೇಶಾದ್ಯಂತ 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
ರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ ಖಮೇನಿ ಕೊಲ್ಲಲ್ಪಟ್ಟಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ದೃಢಪಡಿಸಿವೆ. ಈ ಹಿನ್ನೆಲೆಯಲ್ಲಿ ಇರಾನ್ನಲ್ಲಿ 40 ದಿನಗಳ ಶೋಕಾಚರಣೆ ಮತ್ತು 7 ದಿನಗಳ ಸಾರ್ವಜನಿಕ ರಜೆ ಘೋಷಿಸಲಾಗಿದೆ.
ಯುದ್ಧದ ಭೀತಿ: ಈ ಬೆಳವಣಿಗೆಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಭೀಕರ ಯುದ್ಧದ ವಾತಾವರಣ ನಿರ್ಮಾಣವಾಗಿದ್ದು, ದುಬೈ ಮತ್ತು ಅಬುಧಾಬಿ ವಿಮಾನ ನಿಲ್ದಾಣಗಳಲ್ಲಿ ವಿಮಾನ ಸಂಚಾರಕ್ಕೆ ಅಡಚಣೆಯಾಗಿದೆ. ನಟ ‘ಡ್ರೋನ್’ ಪ್ರತಾಪ್ ಸೇರಿದಂತೆ ಹಲವು ಕನ್ನಡಿಗರು ಅಲ್ಲಿನ ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡಿರುವ ವರದಿಯಾಗಿದೆ





Leave a comment