SUDDIKSHANA KANNADA NEWS/ DAVANAGERE/ DATE-30-05-2025
ಬೆಂಗಳೂರು: ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಆದರೆ ಇದರಲ್ಲಿ ನಿರೀಕ್ಷಿತ ಪ್ರಗತಿ ಯಾಕೆ ಸಾಧ್ಯವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಸುಮಾರು ಶೇ. 74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚನೆ ನೀಡಿಯಾಗಿತ್ತು. ಆದರೂ ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ ಏಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ನಮ್ಮ ಸರ್ಕಾರ ಹೊಸದಾಗಿ ಘೋಷಣೆ ಮಾಡಿರುವ ಎಲ್ಲಾ ಇಂದಿರಾ ಕ್ಯಾಂಟೀನ್ ಗಳು ಕಾರ್ಯಾರಂಭ ಮಾಡಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಂದಿರಾ ಕ್ಯಾಂಟೀನ ಗಳಿಗೆ ಇನ್ನೂ 5ಕಡೆ ಸ್ಥಳ ಗುರುತಿಸಬೇಕಾಗಿದೆ ಎಂದು ಹೇಳಿದರು.
ತಕ್ಷಣ ನಿವೇಶನ ಗುರುತಿಸಬೇಕು. ಹೊಸದಾಗಿ ಘೋಷಣೆ ಮಾಡಲಾಗಿರುವ 186 ಇಂದಿರಾ ಕ್ಯಾಂಟೀನ್ ಗಳ ಪೈಕಿ ಕೇವಲ 103 ನಿರ್ಮಾಣ ಕಾರ್ಯ ಪೂರ್ಣಗೊಂಡಿವೆ. ಆಹಾರ ವಿತರಣೆ 43 ಇಂದಿರಾ ಕ್ಯಾಂಟೀನ್ ಗಳಲ್ಲಿ ಮಾತ್ರ ಪ್ರಾರಂಭವಾಗಿದೆ ಎಂದು ಹೇಳಿದರು.
ಎಲ್ಲಾ ಕಡೆ ಆಹಾರ ವಿತರಣೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.