Site icon Kannada News-suddikshana

ಶ್ರೀನಗರ: ಗುಂಡಿನ ಚಕಮಕಿ- ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರು ಹಾಗೂ ಭಾರತೀಯ ಸೇನೆ ಪಡೆ ನಡುವೆ ಭಾರೀ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ದೇಸಾ ಅರಣ್ಯ ಪ್ರದೇಶದ ಧರಿ ಗೋಟೆ ಉರರಬಾಗಿಯಲ್ಲಿ ಸೋಮವಾರ ರಾತ್ರಿ 7.45 ರ ಸುಮಾರಿಗೆ ಜಂಟಿ ಕಾರ್ಡನ್ ಮತ್ತು ಶೋಧ ಪ್ರಾರಂಭಿಸಿದಾಗ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ವರದಿಗಳು ತಿಳಿಸಿವೆ. ರಾಷ್ಟ್ರೀಯ ರೈಫಲ್ಸ್ (ಆರ್‌ಆರ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ (ಜೆಕೆ ಪೊಲೀಸ್) ವಿಶೇಷ ಕಾರ್ಯಾಚರಣೆ ಗ್ರೂಪ್ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದರು. ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಅಧಿಕಾರಿ ಸೇರಿ ನಾಲ್ವರು ಸೇನಾ ಸಿಬ್ಬಂದಿ ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Exit mobile version