Site icon Kannada News-suddikshana

ಜಮ್ಮುಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಹುಪರಾಕ್: ಬಿಜೆಪಿಗೆ ಭಾರೀ ಹಿನ್ನೆಡೆ, ಕೈ ಕೂಟ ಅಧಿಕಾರಕ್ಕೆ ಫಿಕ್ಸ್

SUDDIKSHANA KANNADA NEWS/ DAVANAGERE/ DATE:08-10-2024

ಕಾಶ್ಮೀರ: ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರ ಹಿಡಿಯುವುದು ಬಹುತೇಕ ಖಚಿತ. ಜಮ್ಮು ಮತ್ತು ಕಾಶ್ಮೀರ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು, ಸರ್ಕಾರ ರಚನೆ ಮಾಡುವತ್ತ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಮುನ್ನುಗ್ಗುತ್ತಿದೆ.

ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟವು ಇಲ್ಲಿಯವರೆಗೆ 50 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಮುನ್ನಡೆ ಪ್ರಕಾರ ಸ್ಪಷ್ಟ ಬಹುಮತ ಸಿಕ್ಕಿದೆ. 90 ಸದಸ್ಯರ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಅಂಚೆ ಮತ ಎಣಿಕೆ ಶುರುವಾದಾಗಿನಿಂದ ಇಲ್ಲಿಯವರೆಗೆ ಕಾಂಗ್ರೆಸ್ ಮೈತ್ರಿಕೂಟ ಬಹುಮತಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಸದ್ಯದ ಮಾಹಿತಿ ಪ್ರಕಾರ 27 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ, ಕಾಂಗ್ರೆಸ್ ಮೈತ್ರಿಕೂಟ 50ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ ಎಂದು ಮಾಹಿತಿ ಲಭಿಸಿದೆ.

Exit mobile version