SUDDIKSHANA KANNADA NEWS/ DAVANAGERE/ DATE:24-11-2023
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27 ರಂದು ಬೆಳಿಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಜನರ ಬಳಿಗೇ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಸೂಚಿಸಿದ್ದರು. ಇದೀಗ ಸ್ವತಃ ಮುಖ್ಯಮಂತ್ರಿಯವರು ಬೆಂಗಳೂರಿನಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಬಗೆಹರಿಸಲು ಕ್ರಮ ಕೈಗೊಳ್ಳಲಿದ್ದಾರೆ.
ಜನತಾ ದರ್ಶನದ ಸ್ವರೂಪ ಮತ್ತು ಸಿದ್ಧತೆಗಳ ಕುರಿತು ನಂತರದಲ್ಲಿ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.