Site icon Kannada News-suddikshana

ಟೆಸ್ಟ್ ಚರಿತ್ರೆಯಲ್ಲೆ ಯಾರೂ ಮಾಡಿರದ ನೂತನ ದಾಖಲೆ ತನ್ನದಾಗಿಸಿಕೊಂಡ ಜಸ್ಪ್ರೀತ್ ಬೂಮ್ರಾ!

ಭಾರತ ತಂಡದ ಬೌಲಿಂಗ್ ಶಕ್ತಿಯಾಗಿರುವ ಜಸ್ಪ್ರೀತ್ ಬೂಮ್ರಾ ರವರು ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ 6 ವಿಕೆಟ್ ಕಬಳಿಸುವ ಮೂಲಕ ಬೂಮ್ರಾ ಹಲವಾರು ದಾಖಲೆಗಳನ್ನು ತನ್ನದಾಗಿಸಿಕೊಂಡಿದ್ದಾರೆ.

ಬ್ರಿಸ್ಬೇನ್ ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ಪಡೆದು ಮಿಂಚಿದರು, ಇದರಿಂದ ಆಸ್ಟ್ರೇಲಿಯಾ ವಿರುದ್ಧ ಅತೀ ಹೆಚ್ಚು ವಿಕೆಟ್ ಪಡೆದ ಎರಡನೇ ಅಗ್ರಗಣ್ಯ ಬೌಲರ್ ಎನಿಸಿಕೊಂಡರು, ಈ ನಿಟ್ಟಿನಲ್ಲಿ ಭಾರತದ ಮಾಜಿ ದಿಗ್ಗಜ ಕ್ರಿಕೆಟಿಗ ಅನಿಲ್ ಕುಂಬ್ಳೆ ರವರ ದಾಖಲೆಯನ್ನು ಸರಿಗಟ್ಟಿದರು.

ಬೂಮ್ರಾ ಆಸ್ಟ್ರೇಲಿಯಾದಲ್ಲಿ ಒಟ್ಟು 50 ಟೆಸ್ಟ್ ವಿಕೆಟ್ ಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದರೆ, ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ 51 ವಿಕೆಟ್ ಪಡೆಯುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. ಬೂಮ್ರಾ ಇನ್ನು ಕೇವಲ ಎರಡು ವಿಕೆಟ್ ಪಡೆದರೆ ಕಪಿಲ್ ದೇವ್ ರ ಸಾರ್ವಕಾಲಿಕ ದಾಖಲೆಯನ್ನು ಸರಿಗಟ್ಟಲಿದ್ದಾರೆ.

ಇನ್ನೂ, ಟೆಸ್ಟ್ ಅಲ್ಲಿ‌ 2೦ಕ್ಕಿಂತ ಕಡಿಮೆ ಸರಾಸರಿಯಲ್ಲಿ 190 ಟೆಸ್ಟ್ ವಿಕೆಟ್ ಪಡೆದ ವಿಶ್ವದ ಏಕೈಕ ಬೌಲರ್ ಎಂಬ ಹೆಗ್ಗಳಿಕೆಗೆ ಬೂಮ್ರಾ ಭಾಜನಾರಾಗಿದ್ದಾರೆ.

Exit mobile version